ವೀರರಾಣಿ ಕಿತ್ತೂರ ಚನ್ನಮ್ಮ ನಾಟಕದ ಎರಡನೆಯ ದಿನದ ಪ್ರದರ್ಶನ
ಲೋಕದರ್ಶನ ವರದಿ
ಶಿಗ್ಗಾವಿ 21: ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಧಾರವಾಡ ರಂಗಾಯಣದಿಂದ ಪ್ರದರ್ಶನಗೊಳ್ಳುತ್ತಿರುವ ಬೆಳ್ಳಿಚುಕ್ಕಿ ವೀರರಾಣಿ ಕಿತ್ತೂರ ರಾಣಿಚೆನ್ನಮ್ಮ ಅವರ ಘತವೈಭವ ಸಾರುವ ವೀರರಾಣಿ ಕಿತ್ತೂರ ಚನ್ನಮ್ಮ ಮೆಗಾ ನಾಟಕದ ಎರಡನೆಯ ದಿನದ ಪ್ರದರ್ಶನವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಶಿವಾನಂದ ಮ್ಯಾಗೇರಿ ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಅಧ್ಯಕ್ಷೆ ರೂಪಾ ಬನ್ನಿಕೊಪ್ಪ, ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ನರಹರಿ ಕಟ್ಟಿ ಪುರಸಭೆ ಸದಸ್ಯ ಮಂಜುನಾಥ ಬ್ಯಾಹಟ್ಟಿ, ಪುರಸಭೆ ನಾಮನಿರ್ದೇಶಿತ ಸದಸ್ಯರಾದ ವಿಶ್ವನಾಥ ಬಂಡಿವಡ್ಡರ, ಪ್ರಶಾಂತ ಬಡ್ಡಿ, ಧಾರವಾಡ ರಂಗಾಯಣದ ಪ್ರಧಾನ ನಿರ್ದೇಶಕ ರಮೇಶ ಪರವೀನಾಯ್ಕರ, ಹಡಪದ ಸಮಾಜ ಅಧ್ಯಕ್ಷ ಮಲ್ಲಿಕಾರ್ಜುನ ಹಡಪದ, ರತ್ನಾ ಬನ್ನಿಕೊಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.