ಮಹಾಲಿಂಗಪುರ ಅರ್ಬನ್ ಬ್ಯಾಂಕ್ ಗೆ ದ್ವಿತೀಯ ಸ್ಥಾನ
ಮಹಾಲಿಂಗಪುರ 30: 2022-23 ನೇ ಸಾಲಿನಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದಕ್ಕಾಗಿ ದಿ. ಮಹಾಲಿಂಗಪುರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಗೆ ಬಿಡಿಸಿಸಿ ಬ್ಯಾಂಕಿನ ಬಹುಮಾನ ಯೋಜನೆಯಡಿ ಜಿಲ್ಲಾ ಮಟ್ಟದ ದ್ವಿತೀಯ ಸ್ಥಾನ ಲಭಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಮಹಾಲಿಂಗಪ್ಪ ಕೋಳಿಗುಡ್ಡ ತಿಳಿಸಿದ್ದಾರೆ.
ಆ. 26 ರ ಶನಿವಾರ ಬಾಗಲಕೋಟೆಯ ನವನಗರದ ಕಲಾಭವನದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಮಹಾಲಿಂಗಪ್ಪ ಕೋಳಿಗುಡ್ಡ ಹಾಗೂ ಮ್ಯಾನೇಜರ್ ಎಸ್.ಎಮ್.ಗುಣದಾಳ ಮತ್ತು ನಿರ್ದೇಶಕ ಮಂಡಳಿಯವರಿಗೆ ಪ್ರ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.