ಯೂನಿವರ್ಸಿಟಿ ಬ್ಲ್ಯೂ ಆಗಿ ಆಯ್ಕೆ

ಯೂನಿವರ್ಸಿಟಿ ಬ್ಲ್ಯೂ ಆಗಿ ಆಯ್ಕೆ

ಲೋಕದರ್ಶನ ವರದಿ 

ಮೂಡಲಗಿ 23: ಬೆಳಾಗಾವಿ ಜಿಲ್ಲೆಯ ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ (ಬಿ. ಎಸ್‌. ಡ್ಲ್ಯೂ) ಮೂರನೆಯ ಸೆಮಿಸ್ಠರ್ ವಿದ್ಯಾರ್ಥಿಯಾದ ತಾಹೀರ ಹುಸೇನ ಅವರು 100 ಮೀಟರ್ ವಿಭಾಗದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್‌ ತಂಡಕ್ಕೆ (ಯೂನಿವರ್ಸಿಟಿ ಬ್ಲ್ಯೂ) ಆಯ್ಕೆಯಾಗುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ.  

ಇವರು 100 ಮೀಟರ್ ಓಟವನ್ನು ಕೇವಲ 10.85 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿ ಈ ಸಾಧನೆಯನ್ನು ಮಾಡಿರುತ್ತಾರೆ. ಇವರ ಈ ಸಾಧನೆಗೆ ಮಹಾವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ಸರ್ವ ಸದಸ್ಯರು, ಪ್ರಾಂಶುಪಾಲರಾದ ಮಹೇಶ ಕಂಬಾರ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶುಭ ಕೋರಿರುತ್ತಾರೆ. 


ಸುದ್ದಿ ಓದಿ