ಬ್ಯಾಡ್ಗಿ

ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಬ್ಯಾಡಗಿ 08: ತಾಲೂಕಿನ ಅತ್ತಿಕಟ್ಟಿ ಹಾಗೂ ಗುಡ್ಡದ ಮಲ್ಲಾಪುರ ಗ್ರಾಮಗಳ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಪ್ರಸಕ್ತ 2020-21ನೇ ಸಾಲಿನ  ರಾಷ್ಟ್ರಮಟ್ಟದ ಪ್ರತಿಭಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.ಅತ್ತಿಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಭಾಗ್ಯಲಕ್ಷ್ಮಿ ಶಿವಪ್ಪ ಕರಿನಾಗಣ್ಣನವರ ಹಾಗೂ ಗುಡ್ಡದ ಮಲ್ಲಾಪುರ ಗ್ರಾಮದ ಮೂಕೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ನಾಗವೇಣಿ ಸುರೇಶ ದೊಡ್ಡಮನಿ ಪ್ರಸಕ್ತ ಸಾಲಿನಲ್ಲಿ ಜರುಗಿದ ಪರೀಕ್ಷೆಯಲ್ಲಿ ಪಾಲ್ಗೊಂಡು ತೇರ್ಗಡೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 12ಸಾವಿರ ರೂ.ಗಳ ವಿದ್ಯಾರ್ಥಿವೇತನ ದೊರೆಯಲಿದೆ. ವಿದ್ಯಾರ್ಥಿನಿಯರನ್ನು ಎಸ್‌’ಡಿಎಂಸಿಯವರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ. 


ಸುದ್ದಿ ಓದಿ