ರಾಜ್ಯಮಟ್ಟಕ್ಕೆ ಆಯ್ಕೆ


ಮುಂಡಗೋಡ:ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರೌಢಶಾಲೆಗಳ ಮತ್ತು ಪದವಿಪೂರ್ವ ಕಾಲೇಜುಗಳ ಉತ್ತರಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಲೊಯೋಲ ಸಂಯುಕ್ತ ಪದವಿಪೂರ್ವ ಕಾಲೇಜ್ನ ವಿದ್ಯಾರ್ಥಿಗಳು ಸಾಧನೆ ತೋರಿದ್ದಾರೆ.
ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ 110ಮೀಟರ್ ಹರ್ಡಲ್ಸ್ನಲ್ಲಿ ಪ್ರೇಮ್ ಸಿದ್ದಿ ಪ್ರಥಮ ಸ್ಥಾನ ಮತ್ತು ಜಾವೆಲಿನ್ ಥ್ರೋದಲ್ಲಿ ಟ್ಯಾಲಿಯೋ ನಾಯ್ಕ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಜೋಯಲ್ ಸಿದ್ದಿ ಜಾವೆಲಿನ್ ಥ್ರೋದಲ್ಲಿ ಪ್ರಥಮ ಹಾಗೂ 110ಮೀಟರ್ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗಳಿಗೆ ಕಾಲೇಜ್ನ ಪ್ರಾಚಾರ್ಯ ಫಾ.ಜಾನ್ಸನ್ ಪಿಂಟೊ, ಆಡಳಿತ ಮಂಡಳಿ, ದೈಹಿಕ ಶಿಕ್ಷಕ ವಿ.ವಿ.ಮಲ್ಲನಗೌಡ ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.