ವೈಯಕ್ತಿಕ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಶಿರಹಟ್ಟಿ 29: ಪಟ್ಟಣದ ಸಿಸಿಎನ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಕುಶಾಂತ ಬಸವರಾಜ ಕಂಬಳಿ ಇತ್ತೀಚೆಗೆ ಗದಗನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 100 . ಮತ್ತು 200 ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಪಟ್ಟಣದ ಸಂಘ-ಸಂಸ್ಥೆಗಳು, ಶಾಲೆಯ ಶಿಕ್ಷಕ ಸಿಬ್ಬಂದಿ ಮತ್ತು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.