ಧಾರವಾಡ - ಹುಬ್ಬಳ್ಳಿ

ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ಗೆ ಆಯ್ಕೆ

ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ಗೆ ಆಯ್ಕೆ

ಧಾರವಾಡ 27: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇಂದ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೆ. ಇ. ಬೋರ್ಡಿನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ತಂಡದ ಮೂರು ಕ್ರೀಡಾಪಟುಗಳು ರಾಜ್ಯಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದಾರೆಂದು ಪ್ರಾಚಾರ್ಯೆ ಸುನಿತಾ ಕಡಪಟ್ಟಿ ತಿಳಿಸಿದ್ದಾರೆ. 

ಕಿಟಲ್ ಕಲಾ ಮಹಾವಿದ್ಯಾಲಯದ ಮೈದಾನದಲ್ಲಿ ಜರುಗಿದ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಕ್ರೀಡಾ ಕೂಟದಲ್ಲಿ ಕೆ. ಇ. ಬೋರ್ಡಿನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮಂಜುನಾಥ ಲಮಾಣಿ, ಪ್ರದೀಪ ಲಮಾಣಿ ಮತ್ತು ನಿತಿನ್ ಭೋವಿವಡ್ಡರ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ತಂಡವು ರನ್ನರ್ಸ ಅಪ್ ಪಡೆದು ಕೊಂಡಿದೆ. ಸಂಸ್ಥೆಯ ಕಾರ್ಯಾಧ್ಯಕ್ಷರಾದ ಎಸ್‌. ಟಿ. ಪಾಟೀಲ, ಕಾರ್ಯದರ್ಶಿ ಡಿ. ಎಸ್‌. ರಾಜಪುರೋಹಿತ್, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ಸಿಬ್ಬಂದಿಯವರು ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ. 


ಸುದ್ದಿ ಓದಿ