ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆ
ಲೋಕದರ್ಶನ ವರದಿ
ಶಿಗ್ಗಾವಿ : ಪಟ್ಟಣದ ಚನ್ನಪ್ಪ ಕುನ್ನೂರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಶಟಲ್‌ಕಾಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಮಾಜಿ ಸಂಸದ ಮಂಜುನಾಥ ಕುನ್ನೂರ, ಕಾರ್ಯದರ್ಶಿ ರಾಜು ಕುನ್ನೂರ, ಪ್ರಾಚಾರ್ಯ ಡಾ. ನಾಗರಾಜ ದ್ಯಾಮನಕೊಪ್ಪ, ಮುಖ್ಯೋಪಾಧ್ಯಾಯ ಜಿ. ಎಂ. ಅರಗೋಳ, ಸಿ. ಟಿ. ಪಾಟೀಲ, ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.