ಇಂಡಿ

ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳ ಆಯ್ಕೆ

ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳ ಆಯ್ಕೆ

ಇಂಡಿ: ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತಾಲೂಕಿನ ಹಿರೇಮಸಳಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು  ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಹಿರಿಯರ ವಿಭಾಗದಲ್ಲಿ ಮಣ್ಣಿನಿಂದ ತಯಾರಿಸಿದ ಲಚ್ಯಾಣ ಶ್ರೀ ಸಿದ್ದಲಿಂಗ ಮಹಾರಾಜರ ಮೂರ್ತಿ ತಯಾರಿಸಿದ ವಿದ್ಯಾರ್ಥಿ ಶಿವಕುಮಾರ್ ಶಿಳ್ಳೆನವರ್, ಚಿತ್ರಕಲೆ ಹಿರಿಯರ ವಿಭಾಗದಲ್ಲಿ ಮಹಾದೇವಿ ಮಾದರ್, ಛದ್ಮವೇಷ ಹಿರಿಯರ ವಿಭಾಗದಲ್ಲಿ ಮಯೂರಿ ಹಿಪ್ಪರಗಿ ಹಾಗೂ ಚಿತ್ರಕಲೆ ಕಿರಿಯರ ವಿಭಾಗದಲ್ಲಿ ಸೌಮ್ಯ ಮರಡಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯಗುರು ಆನಂದ್ ಕೆಂಭಾವಿ, ಹಾಗೂ ಎಲ್ಲಾ ಸಹ ಶಿಕ್ಷಕರು ಅಭಿನಂದಿಸಿದ್ದಾರೆ. ತಾಲೂಕಿನ ಹಿರೇಮಸಳಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರ ಪ್ರಯುಕ್ತ ಶಾಲಾ ಶಿಕ್ಷಕರು ಅಭಿನಂದಿಸಿದರು. 


ಸುದ್ದಿ ಓದಿ