ಜಿಲ್ಲಾ ಮಟ್ಟಕ್ಕೆ ಆಯ್ಕೆ
ಲೋಕದರ್ಶನ ವರದಿ
ಗೋಕಾಕ 15: ಸಮೀಪದ ಹಿರೇಕೊಪ್ಪ ಕೆ.ಎಸ್.ಗ್ರಾಮದ ಬಿ.ಜಿ.ಪ್ರೌಢಶಾಲೆಯ ವಿದ್ಯಾರ್ಥಿನಿ ಪಲ್ಲವಿ ಕಂಬಾರ ಇವರು ಶಿಕ್ಷಣ ಇಲಾಖೆಯವರು ಆಯೋಜಿಸಿದ್ದ ತಾಲೂಕು ಮಟ್ಟದ ಆಂಗ್ಲ ಮಾದ್ಯಮ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಯನ್ನು ಆಡಳಿತ ವಂುಡಳಿ, ಮುಖ್ಯೋಪಾದ್ಯಾಯ ಬಿ.ಆರ್.ಚಿಪ್ಪಲಕಟ್ಟಿ, ಮಾರ್ಗದರ್ಶನ ನೀಡಿದ ಶಿಕ್ಷಕ ಆರ್.ಎಸ್.ಕಲ್ಯಾಣಿ ಹಾಗೂ ಶಿಕ್ಷಕ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.