ರಾಷ್ಟ್ರೀಯ

ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ನಿಧನ

ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್  ನಿಧನ

ನವದೆಹಲಿ, ನವೆಂಬರ್ 25:  ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರು ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ  ಗುರುಗ್ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಅವರಿಗೆ  71 ವರ್ಷ ವಯಸ್ಸಾಗಿತ್ತು .

8 ಭಾರಿ ಸಂಸದರಾಗಿದ್ದ ಅವರು ,   ಬಹುಅಂಗಾಂಗ ವೈಫಲ್ಯ ಸಮಸ್ಯೆಯಿಂದ  ಬಳಲುತ್ತಿದ್ದರು, ಜೊತೆಗೆ , ಇತ್ತೀಚಿಗೆ ಕೊರೋನ ತಗುಲಿರುವುದು ಖಚಿತವಾಗಿತ್ತು. ಈ ಹಿನ್ನೆಲೆ ಗುರುಗ್ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಮುಂಜಾನೆ  ಮೃತಪಟ್ಟಿರುವ ಬಗ್ಗೆ ಪುತ್ರ ಫೈಜಲ್ ಮಾಹಿತಿ ನೀಡಿದ್ದಾರೆ.

"ನಮ್ಮ ತಂದೆ ಅಹ್ಮದ್ ಪಟೇಲ್ ಅವರು ಬುಧವಾರ  ನಮ್ಮನ್ನೆಲ್ಲ ಅಗಲಿ ಹೋಗಿದ್ದಾರೆ ಎಂದು ತಿಳಿಸುವುದಕ್ಕೆ ವಿಷಾದಿಸುತ್ತೇನೆ. ಕಳೆದ ಒಂದು ತಿಂಗಳ ಹಿಂದೆ ಅವರಿಗೆ ಕೊರೊನಾವೈರಸ್ ತಗುಲಿರುವುದು ದೃಢಪಟ್ಟಿದ್ದು, ಅಂದಿನಿಂದ ಅವರ ಆರೋಗ್ಯ ಬಹಳಷ್ಟು ಹದಗೆಟ್ಟಿತ್ತು. ಅವರ ಆತ್ಮಕ್ಕೆ ಅಲ್ಲಾ ಶಾಂತಿ ನೀಡಲಿ" ಎಂದು ಪುತ್ರ ಫೈಜಲ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ನಿಧನಕ್ಕೆ   ಕಾಂಗ್ರೆಸ್ ಮುಖಂಡ  ರಾಹುಲ್ ಗಾಂಧಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. 

ಸುದ್ದಿ ಓದಿ