ಮನರಂಜನೆ

ಹಿರಿಯ ಕಾರ್ಯನಿರ್ವಾಹಕ ನಿರ್ಮಾಪಕ ಕೆ.ಎಸ್. ಪ್ರಕಾಶ್ ನಿಧನ

ಹಿರಿಯ ಕಾರ್ಯನಿರ್ವಾಹಕ ನಿರ್ಮಾಪಕ ಕೆ.ಎಸ್. ಪ್ರಕಾಶ್ ನಿಧನ

ಬೆಂಗಳೂರು, ಸೆಪ್ಟೆಂಬರ್ 15: ಕನ್ನಡ ಚಿತ್ರರಂಗದ ಹಿರಿಯ ಕಾರ್ಯನಿರ್ವಾಹಕ ನಿರ್ಮಾಪಕ ಕೆ ಎಸ್‍ ಪ್ರಕಾಶ್ ನಿಧನರಾಗಿದ್ದಾರೆ.

 

ಸುದ್ದಿ ತಡವಾಗಿ ಬೆಳಕಿಗೆ ಬಂದಿದ್ದು, ಇದೇ 10ರಂದು ಜೆ ಪಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. 

 

ಮೇಕಪ್ ಕಲಾವಿದರಾಗಿ, ಆನಂತರ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಕಳೆದ 4 ದಶಕಗಳಿಂದ ಚಿತ್ರರಂಗದಲ್ಲಿ ಹಲವಾರು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ 300ಕ್ಕೂ ಹೆಚ್ಚು ಚಿತ್ರಗಳಿಗೆ ದುಡಿದಿದ್ದರು.

 

ರಂಗಭೂಮಿ ಕಲಾವಿದರೂ ಆಗಿದ್ದ ಪ್ರಕಾಶ್, ಅನೇಕ ನಾಟಕಗಳಲ್ಲಿಯೂ ಅಭಿನಯಿಸಿದ್ದರು. ಚಿತ್ರರಂಗದಲ್ಲಿ ತಮ್ಮ ಕಾರ್ಯವೈಖರಿಯಿಂದಾಗಿ ಎಲ್ಲ ನಿರ್ಮಾಪಕರ, ನಟ, ನಟಿಯರ ಗೌರವಕ್ಕೆ ಪಾತ್ರರಾಗಿದ್ದರು.

ಸುದ್ದಿ ಓದಿ