ಹಿರಿಯ ನಟ ದಿಲೀಪ್ ಕುಮಾರ್ ಮತ್ತೆ ಅಸ್ವಸ್ಥ
ಮುಂಬೈ, ಜೂನ್ 30: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅವರನ್ನು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸ್ತುತ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕಲ್ಪಿಸಲಾಗುತ್ತಿದೆ. ಇತ್ತೀಚೆಗೆ ಅವರು ಇದೇ ರೀತಿಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಎರಡು ವಾರಗಳ ಹಿಂದೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, ಮತ್ತೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ದಿಲೀಪ್ ಕುಮಾರ್ ಅವರ ವಯಸ್ಸು 98 ವರ್ಷಗಳಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಸಿನಿ ಪ್ರಮುಖರು, ಅಭಿಮಾನಿಗಳು ಹಾರೈಸಿದ್ದಾರೆ.