ಮನರಂಜನೆ

ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಗೆ ದಾಖಲು

ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಗೆ ದಾಖಲು

ಮುಂಬೈ, ಜೂನ್ 30: ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ್ಯುಮೋನಿಯಾದಿಂದ ಬಳಲು‍ತ್ತಿರುವ ನಾಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.

"ಎರಡು ದಿನಗಳ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಮಾಹಿತಿ ನೀಡಿದ್ದಾರೆ. 

"ನಾಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರೊಂದಿಗೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.

ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿದ್ದಾಗ, ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಯೇ ಇದ್ದಾರೆ. ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದಿದ್ದರು.

ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಾಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ.  ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿಯೂ ಕಾಣಿಸಿಕೊಂಡಿರುವುದು ಸ್ಯಾಂಡಲ್ ವುಡ್ ಪಾಲಿಗೆ ವಿಶೇಷ ಎನ್ನಬಹುದು. 

ಸುದ್ದಿ ಓದಿ