ಪ್ರತ್ಯೇಕ ಪ್ರಕರಣ: ನೀರಿನಲ್ಲಿ ಮುಳುಗಿ ಯುವಕ, ಮಹಿಳೆ ಸಾವು
ಮೈಸೂರು/ಬೆಳಗಾವಿ, ಅ 14: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ನೀರಿನಲ್ಲಿ ಮುಳುಗಿ ಯುವಕ ಹಾಗೂ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ನೀರು ತರಲು ಹೋಗಿದ್ದಾಗ ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೂಡ್ಲುರು ಎಂಬಲ್ಲಿ ವರದಿಯಾಗಿದೆ. 19 ವರ್ಷದ ಧನುಶ್ ಮೃತ ದುದರ್ೆವಿ. ಸೋದರಮಾವನ ತಿಥಿ ಕಾರ್ಯಕ್ಕೆ ಬಂದಿದ್ದ ಧನುಶ್, ಸಮಾಧಿ ಸ್ವಚ್ಛಗೊಳಿಸಲು ನೀರು ತರಲು ಲಕ್ಷ್ಮಣ ತೀರ್ಥ ನದಿಗೆ ತೆರಳಿದ್ದಾಗ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮಕ್ಕಳಿಗೆ ಈಜು ಕಲ್ಲಿಸುತ್ತಿದ್ದ ವೇಳೆ ತಾಯಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನೇಜ ಗ್ರಾಮದಲ್ಲಿ ಸಂಭವಿಸಿದೆ. ಶಿಲ್ಪಾ ಚನ್ನಗೌಡರ ಎಂಬುವವರು ತಮ್ಮ ಮಕ್ಕಳಿಗೆ ಈಜು ಕಲಿಸುತ್ತಿದ್ದರು. ಈ ವೇಳೆ ಮೂರ್ಚೆ ಬಂದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೂರ್ಚೆ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ನೀರಿನಲ್ಲಿದ್ದಾಗಲೇ ಮೂರ್ಚೆ ಬಂದು ಇಹಲೋಕ ತ್ಯಜಿಸಿದ್ದಾರೆ. ತಾಯಿ ಮುಳುಗುವ ವೇಳೆ ಮಕ್ಕಳು ಜೋರಾಗಿ ಕೂಗಾಡಿದ್ದರು. ಸ್ಥಳೀಯರು ಸ್ಥಳಕ್ಕಾಗಮಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಜರು ಮಾಡಿ ತನಿಖೆ ಮುಂದುವರೆಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 