ಜನರ ಸೇವೆಯೇ ದೇವರ ಸೇವೆ ; 74ನೇ ಇಪಿಎಫ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸಿ. ಎಸ್ ಮೊಹಮ್ಮದ್ ಹ್ಯಾರಿಸ್ ಸುಮೀರ್
ಬಳ್ಳಾರಿ, ನ.04: ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಸಾರಿದ ’ಕಾಯಕವೇ ಕೈಲಾಸ’ ಎಂಬ ತತ್ವದ ಆಧಾರದ ಮೇಲೆ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ನಿರ್ವಹಿಸಬೇಕು. ನೀವು ಮಾಡುತ್ತಿರುವ ಕೆಲಸವೂ ಜನರ ಸೇವೆಯಾಗಿದೆ. ಜನರಿಗೆ ಸಲ್ಲಿಸುವ ಸೇವೆ ದೇವರಿಗೆ ಸಲ್ಲಿಸುವ ಸೇವೆಗೆ ಸಮಾನವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತ್ ಸಿ ಎಸ್ ಮಹಮ್ಮದ್ ಯಾರಿ ಸುಮೀರ್ ಅಭಿಪ್ರಾಯ ಪಟ್ಟರು.
ಅವರು ನಗರದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ನೌಕರರ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಒ) ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ 74ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು ಪ್ರತಿಯೊಬ್ಬ ನೌಕರರು ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರಿ ಹಾಗೂ ವಿವಿಧ ಸಂಸ್ಥೆಗಳ ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಅರಿತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಅವ್ವಾರು ಮಂಜುನಾಥ್ , ಹರ್ಮನ್ದೀಪ್ ಸಿಂಗ್, ಅಶೋಕ್, ಶಿವಯ್ಯ, ಪಿಎಫ್ ಕಮಿಷನರ್ ವೆಂಕಟ್ ಪ್ರವೀಣ್ ಸೇರಿದಂತೆ ಕಾರ್ಯಕ್ರಮದಲ್ಲಿ ಹಲವಾರು ಉದ್ಯೋಗಿಗಳು ಮತ್ತು ಉದ್ಯೋಗದಾತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಕಾರ್ಯಕ್ರಮವನ್ನು ಶಾಂತಲಾ ಜೋಶಿ ನಿರೂಪಿಸಿದರು.