ಜಮಖಂಡಿ

ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಸಮಾಜದ ಒಗ್ಗಟ್ಟಿಗೆ ಆದ್ಯತೆ ನೀಡಿ

ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಸಮಾಜದ ಒಗ್ಗಟ್ಟಿಗೆ ಆದ್ಯತೆ ನೀಡಿ
Set aside the differences among the sub-sects of the Veerashaiva Lingayat community and prioritize t

ಲೋಕದರ್ಶನ ವರದಿ, 

ಜಮಖಂಡಿ 19: ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಸಮಾಜದ ಒಗ್ಗಟ್ಟಿಗೆ ಆದ್ಯತೆ ನೀಡಬೇಕು. ಎಲ್ಲ ಸಮಾಜಗಳನ್ನು ಒಗ್ಗೂಡಿಸಿ ಶಾಂತಿ, ಸಾಮರಸ್ಯದ ಸಂದೇಶ ಸಾರುವ ಕಾರ್ಯವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ್ ಹೇಳಿದರು.ನಗರದಲ್ಲಿ ರಂಭಾಪುರಿ ಜಗದ್ಗುರುಗಳ ದಿವ್ಯಸಾನ್ನಿಧ್ಯದಲ್ಲಿ ನಡೆದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಅವರು, ಜಗದ್ಗುರು ರೇಣುಕಾಚಾರ್ಯರ ಪರಂಪರೆ ಹಾಗೂ 12ನೇ ಶತಮಾನದ ಬಸವಣ್ಣನವರ ಸಾಮಾಜಿಕ ಸುಧಾರಣೆಯ ಸಂದೇಶಗಳು ಸಮಾಜಕ್ಕೆ ಮಾರ್ಗದರ್ಶಿಯಾಗಿವೆ. ಅವುಗಳ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ವೀರಶೈವ ಮತ್ತು ಲಿಂಗಾಯತ ಸಮಾಜ ಒಂದೇ ಎಂಬ ಏಕತೆಯ ಭಾವನೆಯೊಂದಿಗೆ ಎಲ್ಲರೂ ಮುನ್ನಡೆಯಬೇಕು. ಸಮಾಜವನ್ನು ವಿಭಜಿಸುವ ಬದಲು ಒಗ್ಗೂಡಿಸುವ ಪ್ರಯತ್ನಗಳಿಗೆ ಆದ್ಯತೆ ನೀಡಬೇಕು ಎಂದರು.  


ಸುದ್ದಿ ಓದಿ