ಚಿರತೆ ಸೆರೆಹಿಡಯಲು ಬೋನಿನ ಅಳವಡಿಕೆ
Setting a trap to capture a leopard
ಜಮಖಂಡಿ 09: ತಾಲೂಕಿನ ಕೆ,ಡಿ,ಜಂಬಗಿ ಚಿರತೆಯೊಂದು ನಾಯಿಮರಿ ಮತ್ತು ಆಡು ತಿಂದು ಹಾಕಿದ್ದು. ಚಿರತೆಯ ಹೆಜ್ಜೆಯ ಗುರುತು ಎಂದು ಖಚಿತ ಪಡಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನಿನ ವ್ಯವಸ್ಥೆಯನ್ನು ಮಾಡಲಾಗಿದೆ.
ಚಿರತೆ ಹೆಜ್ಜೆಗುರುತು ಪತ್ತೆಹಚ್ಚಿದ್ದು, ಗ್ರಾಮಸ್ಥರಲ್ಲಿ ಭೀತಿ ಮೂಡಿಸಿರುವ ಚಿರತೆಯ ಸೆರೆಗೆ ಆಯಕಟ್ಟಿನ ಸ್ಥಳದಲ್ಲಿ ಬೋನು ಅಳವಡಿಸಿ ಸೆರೆ ಹಿಡಿಯಲು ಸನ್ನದ್ಧವಾಗಿದೆ. ಚಿರತೆಯನ್ನು ಶೀಘ್ರದಲ್ಲಿಯೇ ಸೆರೆ ಹಿಡಿದು ಬೇರೆಡೆ ಸಾಗಿಸಲಾಗುವುದು. ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ತೋಟದ ವಸ್ತಿಯಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹಿಡಿಯಲು ಬೋನು ಅಳವಡಿಸಿದ್ದು, ಬೋನಿನಲ್ಲಿ ಒಂದು ನಾಯಿಯನ್ನು ಕೂಡಿ ಹಾಕಿರುವುದರಿಂದ ನಾಯಿ ತಿನ್ನಲು ಸ್ಥಳಕ್ಕೆ ಚಿರತೆ ಬರುತ್ತದೆ. ಆವಾಗ ಚಿರತೆಯನ್ನು ಹಿಡೆಯಲು ಸಾಧ್ಯ ಎಂದು ವಲಯ ಅರಣ್ಯ ಇಲಾಖೆ ಅಧಿಕಾರಿ ಕಿರಣ ದಾಸರೆಡ್ಡಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 