ಬಳ್ಳಾರಿ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ: ಬೆಳೆ ಹಾನಿ ಪರೀಶೀಲಿಸಿ ಶನಿವಾರದೊಳಗೆ ವರದಿ ಸಲ್ಲಿಸಲು ಸಚಿವ ಬಿ. ನಾಗೇಂದ್ರ ಸೂಚನೆ

ಬಳ್ಳಾರಿ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ: ಬೆಳೆ ಹಾನಿ ಪರೀಶೀಲಿಸಿ ಶನಿವಾರದೊಳಗೆ ವರದಿ ಸಲ್ಲಿಸಲು ಸಚಿವ ಬಿ. ನಾಗೇಂದ್ರ ಸೂಚನೆ Severe drought situation in Ballari district: Minister B. Nagendra directs officials to inspect crop

ಲೋಕದರ್ಶನ ವರದಿ 

ಬಳ್ಳಾರಿ, ಆ.6: ಜಿಲ್ಲೆಯಾದ್ಯಂತ ಮಳೆ ಕೊರತೆಯಿಂದ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ, ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಬೆಳೆ ಹಾನಿಯ ಸಮಗ್ರ ಜಂಟಿ ಸಮೀಕ್ಷೆ ನಡೆಸಿ ಶನಿವಾರದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.  ಗುರುವಾರ ಬಳ್ಳಾರಿ ತಾಲ್ಲೂಕಿನ ಹಲಕುಂದಿ ಹಾಗೂ ಮಿಂಚೇರಿ ಗ್ರಾಮಗಳಲ್ಲಿ ಬೆಳೆ ಹಾನಿಯನ್ನು ಪರೀಶೀಲಿಸಿದ ಬಳಿಕ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.  

ಜಿಲ್ಲೆಯಲ್ಲಿ ಸಮರ​‍್ಕ ಮಳೆಯಾಗದ ಕಾರಣ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ರೈತರು ಬಿತ್ತನೆ ಪೂರ್ಣಗೊಳಿಸಿದ್ದರೂ ಕಳೆದ ಎರಡು ತಿಂಗಳಿಂದ ಮಳೆಯಿಲ್ಲದ ಕಾರಣ ತೊಗರಿ, ಹತ್ತಿ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ಪ್ರಮುಖ ಬೆಳೆಗಳು ಒಣಗುತ್ತಿವೆ. ಅಧಿಕಾರಿಗಳು ಪ್ರತಿ ತಾಲ್ಲೂಕಿನ ಬೆಳೆ ಹಾನಿಯನ್ನು ಸ್ಥಳ ಪರೀಶೀಲನೆ ನಡೆಸಿ ವಾಸ್ತವ ಸ್ಥಿತಿಯ ಆಧಾರದ ಮೇಲೆ ನಿಖರ ವರದಿ ಸಿದ್ಧಪಡಿಸುವಂತೆ ಸಚಿವರು ಸೂಚಿಸಿದರು.