ಸವದತ್ತಿಯಲ್ಲಿ ತೀವ್ರ ಇಂಧನ ಅಭಾವ: ಸಾರ್ವಜನಿಕರ ಆಕ್ರೋಶ
Severe fuel shortage in Savadatti: Public outrage
ಸವದತ್ತಿ, 24 : ನಗರದಲ್ಲಿ ಮಂಗಳವಾರ ಮಧ್ಯಾಹ್ನ ವೇಳೆಗೆ ಪೆಟ್ರೋಲ್ ಕೊರತೆ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ಸಾಲು ಕಿಲೋಮೀಟರ್‌ಗಳವರೆಗೆ ಹಬ್ಬಿದ್ದು, ನಾಗರಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪೆಟ್ರೋಲ್, ಡೀಸೆಲ್ ಅಭಾವ ಇಲ್ಲ ವೆಂದು ಬಂಕ್ ಮಾಲೀಕರು ತಿಳಿಸಿದರು ಜನ ಮುಗಿಬಿಳುತಿದ್ದಾರೆ.ಇಲ್ಲಿನ ಪ್ರಮುಖ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನಕ್ಕಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇದೆ. ಕೆಲಸಕ್ಕೆ ಹೋಗುವ ನೌಕರರು, ಶಾಲೆ-ಕಾಲೇಜು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರು, ಸಕಾಲಕ್ಕೆ ತಲುಪಲಾಗದೆ ಪರದಾಡುತ್ತಿದ್ದಾರೆ. ಕೆಲವು ಬಂಕ್‌ಗಳಲ್ಲಿ ಬೈಕ್ ಸವಾರರು ಮತ್ತು ಟ್ಯಾಕ್ಟರ್,ಕಾರ್, ಅಲೆದಾಡುವಂತಾಗಿದೆ.
ಮಧ್ಯಾಹ್ನ ನಿಂದ ಕ್ಯೂ ನಿಂತರೂ ಪೆಟ್ರೋಲ್ ಸಿಗುತ್ತಿಲ್ಲ. ಇದು ನಮ್ಮ ದೈನಂದಿನ ದುಡಿಮೆಯ ಮೇಲೆ ಪೆಟ್ಟು ಬೀಳುವಂತೆ ಮಾಡಿದೆ. ಅಧಿಕಾರಿಗಳು ಶೀಘ್ರವೇ ಗಮನಹರಿಸಬೇಕು.ಪರಿಸ್ಥಿತಿ ಹೀಗೆಯೇ ಮುಂದುವರೆದರೆ ನಗರದ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಇಂಧನ ಸರಬರಾಜು ಸುಗಮಗೊಳಿಸಲು ಕ್ರಮ ಕೈಗೊಳ್ಳಬೇಕು.ಪೆಟ್ರೋಲ್ ಕೃತಕ ಅಭಾವ ಸೃಷ್ಟಿಸುತ್ತಿರುವವರ ವಿರುದ್ಧ ತನಿಖೆ ನಡೆಸಬೇಕು.ತುರ್ತು ಸೇವೆಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 