ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಪೋಸ್ಕೊ ಪ್ರಕರಣ ದಾಖಲು
ಲೋಕದರ್ಶನ ವರದಿ
ಯರಗಟ್ಟಿ 14: ತಾಲೂಕಿನ ಸತ್ತಿಗೇರಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಮೇಶ ರಮೇಶ ನೇಸರಗಿ ಎಂಬಾತ ಆರೋಪಿ ಬಾಲಕಿಯನ್ನು ದಿ. 07-04-2026 ರಂದು ಅಪಹರಿ ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ವೆಸಗಿದ ಆರೋಪಿಯಾಗಿದ್ದು, ಈತನ ಮಂಗಳವಾರ ಮುರಗೋಡ ಪೊಲೀಸ್ ಠಾಣೆಯ ಅಧಿಕಾರಿಗಳು ಪತ್ತೆ ಮಾಡಿ ಆರೋಪಿಯನ್ನು ಬಂದಿಸಿ ವನವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಯರಗಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು ಆರೋಗ್ಯವಾಗಿದ್ದಾಳೆ. ಚಿಕಿತ್ಸೆ ಬಳಿಕ ಬಾಲಕಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ವರ್ಗಾಯಿಸುವುದಾಗಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ. ಸ್ಥಳಕ್ಕೆ ಮುರಗೋಡ ಪೊಲೀಸ್ ಠಾಣೆಯ ಸಿಪಿಐ ಐ. ಎಮ್. ಮಠಪತಿ, ಪಿಎ??? ಎಲ್. ಬಿ. ಮಾಳಿ ಭೇಟೀನೀಡಿ ಪರೀಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.