ಇಂಗು ಗುಂಡಿ ಪ್ರಯೋಗದಿಂದ ವಿದೇಶಿಗರ ಮನಗೆದ್ದ ಕುನ್ನೂರು ಯುವ ಕೃಷಿಕ ಶಂಕರ್
ಹಾವೇರಿ28: ಮಳೆಯ ಜೂಜಾಟಕ್ಕೆ ಸೆಡ್ಡು ಹೊಡೆದ ಕುನ್ನೂರಿನ ಯುವರೈತ ಶಂಕರ್ ಅವರು ಸ್ವಪ್ರಯತ್ನದಿಂದ ಕೊಳವೆ ಬಾವಿಗೆ ನೀರು ಇಂಗಿಸುವ ಪದ್ಧತಿ ಅಳವಡಿಸಿಕೊಂಡು ಯಶಸ್ವಿ ರೈತನಾಗಿ ದೇಶ-ವಿದೇಶಿಗರ ಗಮನ ಸೆಳೆದಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದ ನಿವಾಸಿಯಾದ ಐ.ಟಿ.ಐ. ಪದವೀಧರ ಶಂಕರ ಸೋಗಲಿ ಅವರು ತಮ್ಮ ಹೊಲದಲ್ಲಿ ಕೊರೆಸಿದಂತಹ ಬೋರವೆಲ್ ನೀರಿನ ಇಳುವರಿಯನ್ನು ದ್ವಿಗುಣ ಗೊಳಿಸುವ ಪ್ರಯತ್ನದಲ್ಲಿ ಯಶಸ್ಸು ಕಂಡು ಅಲ್ಪ ಜಮೀನಿನಲ್ಲಿ ಲಾಭದಾಯಕ ಕೃಷಿಯಲ್ಲಿ ತೊಡಗಿದ್ದಾರೆ.
ಆರಂಭದಲ್ಲಿ ಕೇವಲ ಎರಡು ಇಂಚಿನಷ್ಟು ಮಾತ್ರ ನೀರು ಬಿದ್ದಿದ್ದು ತನ್ನ 1.29ಗುಂಟೆ ಜಮೀನಿಗೆ ನೀರು ಉಣಿಸಲು ಪರದಾಡುತಿದ್ದರು ಮಳೆಯು ಇಲ್ಲದೆ ಕೊಳುವೆ ಬಾವಿಯಲ್ಲಿ ನೀರನ ಪ್ರಮಾಣವು ಕುಸಿತ ಕಂಡ ಶಂಕರ ಸೋಗಲಿ ಅವರು ಕೃಷಿಯನ್ನೆ ನಂಬಿದ ಬದುಕು ಕೈಕೊಡುವ ಆತಂಕದಲ್ಲಿದ್ದರು. ಈ ಸಂದರ್ಭದಲ್ಲಿ ಕೃಷಿ ಇಲಾಖಾ ಅಧಿಕಾರಿಗಳ ಸಲಹೆ ಇವರ ಬದುಕನ್ನು ಬದಲಾಯಿಸಿತು ಎಂದು ಅವರು ಹೇಳುತ್ತಾರೆ.
ಜಮೀನಲ್ಲಿ ತೋಡಿದ ಕೊಳವೆಬಾವಿ ಸಮೀಪದಲ್ಲಿಯೇ ಎರಡು ಇಂಗು ಗುಂಡಿಗಳನ್ನು ನಿಮರ್ಿಸಿದ್ದಾರೆ. ಎರಡು ಮೀಟರ್ ಉದ್ದ, ಒಂದು ಮೀಟರ್ ಅಗಲ, ಎರಡು ಮೀಟರ್ ಆಳವಾದ ಗುಂಡಿಯನ್ನು ತೆಗೆದು, ಗುಂಡಿಯಲ್ಲಿ ಎರಡು ಫೂಟ್ ಮರಳು ಎರಡು ಫೂಟ್ ಇದ್ದಿಲು, ಎರಡು ಫೂಟ್ ದಪ್ಪದಾದ ಜಲ್ಲಿ ಕಲ್ಲು ತುಂಬಿಸಿದ್ದಾರೆ. ಇದರ ಪ್ರತಿಫಲವಾಗಿ ಗುಂಡಿಯಲ್ಲಿ ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಭೂಮಿಗೆ ಇಂಗಿಸಿದ್ದಾರೆ. ಇದರ ಪರಿಣಾಮ ಕೇವಲ ಎರಡು ಇಂಚು ನೀರಿನ ಇಳುವರಿಯ ಕೊಳವೆಬಾವಿ ಇದೀಗ ದ್ವಿಗುಣಗೊಂಡು ನಾಲ್ಕು ಇಂಚು ನೀರು ಹೊರಹೊಮ್ಮುತ್ತಿದೆ.
ಇದಲ್ಲದೆ ಹೊಲದ ಸುತ್ತಲೂ ತಿರುವು ಕಾಲುವೆಯಿಂದ ಮಳೆಗಾಲದಲ್ಲಿ ನೀರನ್ನು ಸಂಗ್ರಹಿಸಿ ಅದನ್ನು ಇಂಗುಗುಂಡಿಗೆ ಸೇರಿಸಲಾಗಿದೆ. ಇಂತಹ ಪ್ರಯೋಗದಿಂದ ತಮ್ಮ ಹೊಲದಲ್ಲಿನ ಮಣ್ಣಿನ ಸಂರಕ್ಷಣೆ ಮತ್ತು ಮಣ್ಣಿನ ಸವಕಳಿಯನ್ನು ತಡೆಯಬಹುದು. ಹೀಗೆ ಮಾಡುವುದರಿಂದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು ತೊಂಬತ್ತು ಲಕ್ಷ ಲೀಟರ್ಗೂ ಅಧಿಕ ಮಳೆ ನೀರನ್ನು ಇಂಗಿಸಲಾಗುತ್ತದೆ. ಇದರ ಪರಿಣಾಮ ಒಂದು ಬೆಳೆ ಬೆಳೆಯಲು ಪರದಾಡುತ್ತಿದ್ದ ನನಗೆ ಮೂರು ಬೆಳೆಯನ್ನು ಬೆಳೆಯುವಷ್ಟು ತೇವಾಂಶ ಭೂಮಿಯಲ್ಲಿರುತ್ತದೆ, ಸಮೃದ್ಧ ಬೆಳೆ ಬರುತ್ತದೆ ಎಂದು ಹೇಳುತ್ತಾರೆ.
ಈ ಪ್ರಯೋಗದಲ್ಲಿ ಮತ್ತಷ್ಟು ಸುಧಾರಣೆಕಂಡುಕೊಂಡ ಶಂಕರ್ ಅವರು ಇಂಗುಗುಂಡಿಯನ್ನ ಕೇವಲ ಮಣ್ಣು, ಕಲ್ಲುಗಳನ್ನು ಬಳಸಿ ನಿಮರ್ಿಸುವ ವಿಧಾನವನ್ನು ಬದಲಿಸಿ, ಹೊಸದಾಗಿ ಸಿಮೆಂಟ್ ರಿಂಗು, ಜಲ್ಲಿ, ಮರಳನ್ನು ಬಳಸಿಕೊಂಡು ಸುಲಭವಾದ ರೀತಿಯಲ್ಲಿ ನೀರನ್ನು ಇಂಗಿಸುವ ಪ್ರಯತ್ನ ಮಾಡಿದ್ದಾರೆ. ಇದರಿಂದ ಮಳೆಗಾಲದಲ್ಲಿ ಇಂಗುಗುಂಡಿಗಳು ಮುಚ್ಚಿಹೋಗುವುದು ತಪ್ಪಿದೆ ಎನ್ನುತ್ತಾರೆ.
ಯುವ ರೈತನ ಈ ಹೊಸ ಪ್ರಯೋಗವನ್ನು ಧಾರವಾಡ ಕೃಷಿ ವಿಶ್ವ ವಿದ್ಯಾಲಯ ವಿದೇಶಿಯರಿಗೆ ಪರಿಚಯಿಸಿದೆ. ಆಸ್ಟ್ರೇಲಿಯಾ, ಇಸ್ರೇಲ್, ಕೆನಡಾ, ಸೇರಿದಂತೆ ಏಳು ರಾಷ್ಟ್ರದ ರೈತ ಪ್ರತಿನಿಧಿಗಳು ಕುನ್ನೂರ ಗ್ರಾಮದ ಶಂಕರ್ ಅವರ ಜಮೀನಿಗೆ ಬಂದು ವೀಕ್ಷಣೆಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಇವರ ಈ ಪ್ರಯೋಗಕ್ಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯವು 2017ರ ಶ್ರೇಷ್ಠ ಯುವ ಕೃಷಿಕ ಪ್ರಶಸ್ತಿ, ದೇಶಪಾಂಡೆ ಫೌಂಡೇಶನ್ ಕೊಡಮಾಡುವ ಕೃಷಿ ಸಿಂಚನ ಪ್ರಶಸ್ತಿ, 2019-20ನೇ ಸಾಲಿನ ಹಾವೇರಿ ಜಿಲ್ಲಾಮಟ್ಟದ ಶ್ರೇಷ್ಟ ಕೃಷಿ ಪ್ರಶಸ್ತಿ ಪ್ರದಾನ ಮಾಡಿ ಪ್ರೋತ್ಸಾಹಿಸಿದೆ.
ತುಂಡು ಭೂಮಿಯಲ್ಲಿ ಹಿಂಡು ಬೇಸಾಯ: 1.29 ಗುಂಟೆ ಜಮೀನು ಮಾತ್ರ ಹೊಂದಿರುವ ಶಂಕರ್ ನೈಸಗರ್ಿಕ ಕೃಷಿ ಪದ್ಧತಿಯಲ್ಲಿ ಬಹು ಬೆಳೆಗಳ ಪದ್ಧತಿಯನ್ನು ಅನುಸರಿಸಿದ್ದಾರೆ. ಈ ಜಮೀನಿನಲ್ಲಿ 303 ಅಡಿಕೆ ಸಸಿ,1200 ಅಂಗಾಂಶಬಾಳೆ, 300 ಶ್ರೀಗಂಧದ ಗಿಡಗಳು, 10 ತೆಂಗಿನ ಗಿಡ, 100 ಲಿಂಬು, ಐದು ಪೇರಲೆ, ಹೊಲದ ಸುತ್ತಲೂ 1120 ಗಾಳಿಮರಗಳು ಹಾಗೂ ಔಷಧೀಯ ಸಸ್ಯಗಳಾದ ಲಿಂಬೆಹುಲ್ಲು (ನೆಗಡಿ), ಮಾಗಣಿ ಬೇರು (ಉಪ್ಪಿನ ಕಾಯಿ ತಯಾರಿಸಲು), ಬಿಳಿ ಗಲಗುಂಜಿ (ಧ್ವನಿ ಸರಿಪಡಿಸಲು), ಪತ್ರಿ ಪಟ-ಪಟ (ಕಿಡ್ನಿ ಹರಳು), ಒಂದೇಲಗಾ (ನೆನಪಿನ ಶಕ್ತಿ ಹೆಚ್ಚಿಸುವುದು ), ಮಧುನಾಸಿನಿ ( ಸಕ್ಕರೆ ಕಾಯಿಲೆ)ಯಂತಹ ಆಯುವರ್ೆದದ ಔಷಧಿಯ ಸಸ್ಯಗಳನ್ನು ಬೆಳೆಸಿರುವುದು ವಿಶೇಷವಾಗಿದೆ.
ತೋಟಗಾರಿಕೆ ಇಲಾಖೆಯ ಸಹಾಯ ಪಡೆದು ಹತ್ತು ಗುಂಟೆಯಲ್ಲಿ ನೆರಳು ಪರದೆ ನಿಮರ್ಿಸಿಕೊಂಡು ತರಕಾರಿ ಬೆಳೆಯನ್ನು ಬೆಳೆಯುತ್ತಾರೆ. ಜಮೀನಿಗೆ ಬೇಕಾಗುವ ಸಾಯವ ಗೊಬ್ಬರ ತಯಾರಿಸಲು ಎರೆಹುಳ ತೊಟ್ಟಿಯನ್ನು ನಿಮರ್ಿಸಿಕೊಂಡಿದ್ದಾರೆ. ದೇಶಿ ಆಕಳು ಸಾಕಾಣಿಕೆಯಿಂದ ಹೈನುಗಾರಿಕೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ದೇಶಿ ಹಸುವಿನಿಂದ ಬಿಜಾಮೃತ, ಜೀವಾಮೃತ, ಹೋದಿಕೆ, ವಾಪಾಸಾ ಹಂತಗಳನ್ನು ಅನುಸರಿಸುತ್ತಿದ್ದಾರೆ. ಈ ಎಲ್ಲ ಪದ್ಧತಿಯ ಅನುಸರಣೆಗೆ ಮಹಾರಾಷ್ಟ್ರದ ಸಹಜ ಕೃಷಿ ಪದ್ಧತಿಯ ಸುಭಾಷ ಪಾಳೆಕೆರ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದಿರುವುದಾಗಿ ತಿಳಿಸುತ್ತಾರೆ. ಇಡೀ ಜಗತ್ತೇ ಇಸ್ರೇಲ್ ಮಾದರಿಯ ಕೃಷಿಪದ್ಧತಿ ಅನುಸರಿಸುವ ತವಕದಲ್ಲಿದ್ದರೆ ನಮ್ಮಲ್ಲಿಯೇ ಸದ್ದಿಲ್ಲದೆ ನೈಸಗರ್ಿಕ ಕೃಷಿ ಪದ್ಧತಿ ಮತ್ತು ಇಂಗುಗುಂಡಿಗಳ ಕ್ರಮದಿಂದ ಲಾಭದಾಯಕ ಕೃಷಿಯಲ್ಲಿ ತೊಡಗಿರುವ ಕುನ್ನೂರ ಶಂಕರ್ ಯುವ ರೈತರಿಗೆ ಮಾದರಿಯಾಗಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 