ಮೇ 12 ರಂದು ಶಂಕರಾಚಾರ್ಯ ಜಯಂತಿ
ಬಳ್ಳಾರಿ,ಮೇ 08: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೇ.12 ರಂದು ನಗರದ ಸಾಂಸ್ಕೃತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ನೆರವೇರಿಸುವುದರ ಮೂಲಕ ಸರಳವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ 2024ರ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ