ಶಂಕರಾಚಾರ್ಯರ ಜಯಂತಿ ಆಚರಣೆ
ಬಳ್ಳಾರಿ 17: ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಆವರಣದಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು.
ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ.ರಂಗಣ್ಣನವರ್ ಅವರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿ ಇದ್ದರು.