ಧಾರವಾಡ - ಹುಬ್ಬಳ್ಳಿ

ಶರಣು ಶರಣಾರ್ಥಿ ಕಾರ್ಯಕ್ರಮ

ಧಾರವಾಡ 09: ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದವತಿಯಿಂದ ಏ.10 ರಂದು ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಚನ್ನಬಸವೇಶ್ವರ ನಗರದಲ್ಲಿನ ಲಿಂಗಾಯತ ಭವನದಲ್ಲಿ ‘ಶರಣು ಶರಣಾರ್ಥಿ’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಪ್ರವರ್ಗ-2 ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿದ ಸಮಾಜದ ಬಂಧುಗಳನ್ನು ಗೌರವಿಸುವ ಈ ಕಾರ್ಯಕ್ರಮದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠಾಧಿಪತಿ  ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು, ಮುಖಂಡರಾದ ಬಸನಗೌಡ ಪಾಟೀಲ ಯತ್ನಾಳ, ಪಿ.ಸಿ.ಸಿದ್ಧನಗೌಡ್ರ, ವಿಜಯಾನಂದ ಕಾಶಪ್ಪನವರ, ಅರವಿಂದ ಬೆಲ್ಲದ, ಶಂಕರ ಪಾಟೀಲ ಮುನೇನಕೊಪ್ಪ, ಸಿ.ಎಂ.ನಿಂಬಣ್ಣವರ, ವಿಜಯಲಕ್ಷ್ಮೀ ಪಾಟೀಲ, ಗುರುರಾಜ ಹುಣಸಿಮರದ ಇನ್ನಿತರರು ಭಾಗವಹಿಸುವರು.

ಆದ್ದರಿಂದ ಸಮಾಜ ಬಾಂಧವರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಮಾಜದ ಮುಖಂಡ ನಿಂಗಣ್ಣ ಕರೀಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಓದಿ