ಶಿಗ್ಗಾವ್

ಶಶಿಕಾಂತ ನಕಲಿ ರೈತ ಮುಖಂಡ; ಹೇಳಿಕೆಗಳು ರಾಜಕೀಯ ಪ್ರೇರಿತ: ನರಹರಿ ಕಟ್ಟೀ

ಶಶಿಕಾಂತ ನಕಲಿ ರೈತ ಮುಖಂಡ; ಹೇಳಿಕೆಗಳು ರಾಜಕೀಯ ಪ್ರೇರಿತ: ನರಹರಿ ಕಟ್ಟೀ


ಶಿಗ್ಗಾವಿ, ಅ.2: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ವೈಯಕ್ತಿಕ ಹಾಗೂ ಕೌಟುಂಬಿಕ ವಿಚಾರವಾಗಿ ಶಶಿಕಾಂತ ಪಡಸಲಗಿ ಎಂಬ ನಕಲಿ ರೈತ ಮುಖಂಡ ಮಾಡಿರುವ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನರಹರಿ ಕಟ್ಟೀ ಆರೋಪಿಸಿದರು.  

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಹ್ಲಾದ ಜೋಶಿ ಅವರು ರೈತರ ಪರ ಕಾಳಜಿ ಹೊಂದಿರುವ ವ್ಯಕ್ತಿಯಾಗಿದ್ದು, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಕಬ್ಬು ಬೆಳೆಗಾರರ ಹೋರಾಟದ ವೇಳೆ ವ್ಯಕ್ತಿಗತ ನಿಂದನೆ ಹಾಗೂ ಅವಾಚ್ಯ ಶಬ್ದಗಳ ಬಳಕೆ ಮಾಡಿರುವುದು ಖಂಡನೀಯ. ಶಶಿಕಾಂತ ಗುರುಜಿ ಅವರು ಈ ಕುರಿತು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.  

ತಾಲೂಕು ಬಿಜೆಪಿ ಅಧ್ಯಕ್ಷ ವಿಶ್ವನಾಥ ಹರವಿ ಮಾತನಾಡಿ, ಶಶಿಕಾಂತ ಗುರುಜಿ ಅವರು ಕಾಂಗ್ರೆಸ್ ಏಜೆಂಟ್ನಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜೋಶಿ ಅವರ ವಿರುದ್ಧ ವೈಯಕ್ತಿಕವಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ಬಿಜೆಪಿ ಕಾರ್ಯಕರ್ತರು ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.  


ಸುದ್ದಿ ಓದಿ