ಗೋಕಾಕ್

ಅ.26ರಂದು ಬೆಟಗೇರಿ ಗ್ರಾಮದಲ್ಲಿ ಸಡಗರದಿಂದ ಶೀಗಿ ಹುಣ್ಣಿಮೆ ಆಚರಣೆ

ಅ.26ರಂದು ಬೆಟಗೇರಿ ಗ್ರಾಮದಲ್ಲಿ ಸಡಗರದಿಂದ ಶೀಗಿ ಹುಣ್ಣಿಮೆ ಆಚರಣೆ

ಬೆಟಗೇರಿ 23 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಡಗರದಿಂದ ಶೀಗಿಹುಣ್ಣಿಮೆಯನ್ನು ಸೋಮವಾರ ಅ.26 ರಂದು ಭೂಮಿತಾಯಿಗೆ ಉಡಿತುಂಬಿ, ಪೂಜಿಸಿ, ಚರಗ ಚಲ್ಲುವ (ಹೊಲ ಹೊಗುವದು) ಕಾರ್ಯಕ್ರಮ ನಡೆಯಲಿದೆ ಎಂದು ಸ್ಥಳೀಯ ವೇದಮೂರ್ತಿ ಈರಯ್ಯ ಹಿರೇಮಠ ತಿಳಿಸಿದ್ದಾರೆ. ಚರಗ ಚೆಲ್ಲುವ ಕಾರ್ಯಕ್ರಮ: ಸ್ಥಳೀಯ ರೈತರು ತಮ್ಮ ತಮ್ಮ ಹೊಲ-ಗದ್ದೆಗಳಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿತಾಯಿಗೆ ಉಡಿತುಂಬಿ, ಪೂಜಿಸಿ, ಚರಗ ಚಲ್ಲುವ ಕಾರ್ಯಕ್ರಮ ಸೋಮವಾರ ಅ.26ರಂದು ನಡೆಯಲಿದೆ. ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಿಗೆ ಸೇರಿಕೊಂಡು ಎತ್ತುಗಳನ್ನು ಶೃಂಗರಿಸಿ, ಎತ್ತಿನ ಬಂಡಿ ಹೂಡಿಕೊಂಡು, ಕೆಲವರು ಕಾಲ್ನಡೆಗೆಯಲ್ಲಿ, ಇನ್ನೂ ಕೆಲವರು ದ್ವಿಚಕ್ರ ವಾಹನಗಳಲ್ಲಿ ತಮ್ಮ ತಮ್ಮ ಹೊಲ-ಗದ್ದೆಗಳಿಗೆ ಹೋಗಿ, ಹೊಲ-ಗದ್ದೆಗಳಲ್ಲಿ ಮನೆಯಿಂದ ಒಯ್ದ ಅಡುಗೆ ಬಿಚ್ಚಿಟ್ಟು ಹೊಲದಲ್ಲಿರುವ ಐದು ಜೋಳದ ದಂಟು, ಚಿಕ್ಕದಾದ(ಪಂಚ ಪಾಂಡವರು)ಕಲ್ಲುಗಳನ್ನು ಹುಡುಕಿ ತಂದು ಪೂಜಿಸಿ, ಹೊಲ-ಗದ್ದೆಯ ತುಂಬೆಲ್ಲಾ ನೈವೇದ್ಯ ರೂಪದಲ್ಲಿರುವ ಮೃಷ್ಟಾನ್ನ ಎಡೆಯನ್ನು ಚರಗ ಚಲ್ಲುವ ಮೂಲಕ ಭೂತಾಯಿಗೆ ನಮನ ಸಮರ​‍್ಿಸಿದ ಬಳಿಕ ಮನೆಮಂದಿ ಹಾಗೂ ಅಕ್ಕ-ಪಕ್ಕದ ಮನೆಯವರು ಸೇರಿಕೊಂಡು ಒಟ್ಟಿಗೆ ಕುಳಿತು ಭೋಜನ ಸವಿದು ಸಂಭ್ರಮಿಸಲಿದ್ದಾರೆ ಎಂದು ಸ್ಥಳೀಯ ಹಿರಿಯ ನಾಗರಿಕರು ತಿಳಿಸಿದ್ದಾರೆ.   

ಈ ವೇಳೆ ಸ್ಥಳೀಯ ಎಮ್‌.ಐ.ನೀಲಣ್ಣವರ, ಬಸವರಾಜ ಪಣದಿ, ಮಾಯಪ್ಪ ಬಾಣಸಿ, ರಾಮಣ್ಣ ಬಳಿಗಾರ ಸೇರಿದಂತೆ  ಹಿರಿಯ ನಾಗರಿಕರು, ಮತ್ತೀತರರು ಇದ್ದರು. 


ಸುದ್ದಿ ಓದಿ