ಸಿರುಗುಪ್ಪ

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಸಿರುಗುಪ್ಪ 20: ಬೆಟ್ಟದ ಹುಲಿ ಇಲಿಯಾಗಿ ಹೋರಾಟ ಮಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಶ್ರಮಿಸಿದರು ಎಂದು ಶಾಸಕ ಎಂ ಎಸ್ ಸೋಮಲಿಂಗಪ್ಪ ಹೇಳಿದರು.

ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಿಂದುಳಿದ ವರ್ಗಗಳ ಇಲಾಖೆ ಸಹಯೋಗದಲ್ಲಿ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನಾಧಿಕಾರಿ ಸಭಾಭವನದಲ್ಲಿ ಹಮ್ಮಿಕೊಂಡ ಛತ್ರಪತಿ ಶಿವಾಜಿ ಮಹಾರಾಜರ 391 ಜಯಂತಿ ಸಮಾರಂಭದಲ್ಲಿ ಶಿವಾಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ತಹಸೀಲ್ದಾರ್ ಎಸ್ ಬಿ ಕೂಡಲಗಿ ಮಾತನಾಡುತ್ತಾ ಛತ್ರಪತಿ ಶಿವಾಜಿ ಯವರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರ ಪಂಕ್ತಿಯಲ್ಲಿದೆ ಶಿವಾಜಿ ಶೌರ್ಯ ನಾರಿ ನಾಯಕತ್ವ ಗುಣ ಮೆಚ್ಚು ವಂತದ್ದು ಗುರು ಮತ್ತು ತಾಯಿ ಯವರ ಮೇಲೆ ಅಪಾರ ಶ್ರದ್ಧೆ ಭಕ್ತಿ ಹೊಂದಿದ್ದರು ಎಂದರು. 

ಹಿಂದುಳಿದ ವರ್ಗಗಳ ಅಧಿಕಾರಿ ಎ ಗಾದಿಲಿಂಗಪ್ಪ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ಪ ಸುಬೇದಾರ ತಾಲೂಕು ಪಂಚಾಯತ್ ಉಪಾಧ್ಯಕ್ಷ ಶರಣಬಸವ ಜನಾಭಿಪ್ರಾಯ ಮುಖಂಡ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಕ್ಷತ್ರೀಯ ಸಮಾಜದ ಅಧ್ಯಕ್ಷ ಯಂಕಣ್ಣ ಸಮಾಜದವರು ಹಾಜರಿದ್ದರು

ಸುದ್ದಿ ಓದಿ