ವಿಜಯಪುರ-ಬಾಗಲಕೋಟೆ ಜಿಲ್ಲೆಗಳ ಕಾಲುವೆಗಳಿಗೆ ನೀರು ಹರಿಸಲು ಸಿಎಂಗೆ ಶಿವಾನಂದ ಪಾಟೀಲ ಮನವಿ
Shivanand Patil appeals to CM to release water into canals of Vijayapura and Bagalkote districts
ಕೊಲ್ಹಾರ 15: ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಲಾಲಬಹದ್ದೂರ ಶಾಸ್ತ್ರಿ (ಆಲಮಟ್ಟಿ) ಜಲಾಶಯದಿಂದ ತಕ್ಷಣ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವಂತೆ ಮಾಜಿ ಸಚಿವ ಹಾಗೂ ಶಾಸಕ ಶಿವಾನಂದ ಪಾಟೀಲ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ.ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಮುಂಗಾರು ಅವಧಿಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗದಿದ್ದರೂ ಹಿಂಗಾರಿನಲ್ಲಿ ಭರ್ತಿಯಾಗುವ ಸಾಧ್ಯತೆ ಹೆಚ್ಚಿದ್ದು, ಈ ಹಿಂದೆ ಹಲವು ಬಾರಿ ಅಂತಹ ನಿದರ್ಶನಗಳು ಕಂಡುಬಂದಿವೆ.
ಆದ್ದರಿಂದ ಈಗಲೇ ನೀರು ಬಿಡುಗಡೆ ಮಾಡಿದರೆ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಉಂಟಾಗಲಿದೆ ಎಂಬ ಆತಂಕಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.ಪ್ರಸ್ತುತ ಜಲಾಶಯದಲ್ಲಿ ಸುಮಾರು 70 ಟಿಎಂಸಿ ಅಡಿ ಬಳಸಬಹುದಾದ ನೀರು ಲಭ್ಯವಿದ್ದು, ಸಂಪೂರ್ಣ ಭರ್ತಿಯಾಗಲು ಇನ್ನೂ 35 ಟಿಎಂಸಿ ಅಡಿ ನೀರಿನ ಅಗತ್ಯವಿದೆ. ಮುಂಗಾರು ಇನ್ನೂ ಮುಕ್ತಾಯವಾಗದ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗುವ ವಿಶ್ವಾಸವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಧಾರಕ್ಕಾಗಿ ಕಾಯುವ ಪರಿಸ್ಥಿತಿ ಇಲ್ಲ. ಜನರ ಸಂಕಷ್ಟವನ್ನು ಮನಗಂಡು ತಕ್ಷಣ ಅಧಿಕಾರಿಗಳಿಗೆ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.ಪ್ರತಿ ವರ್ಷ ಜಲಾಶಯ ಭರ್ತಿಯಾದ ಬಳಿಕ 100ರಿಂದ 200 ಟಿಎಂಸಿ ಅಡಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಆದರೆ ಜಲಾಶಯಕ್ಕೆ ನೀರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬಂದಿಲ್ಲ ಎಂಬ ಕಾರಣ ನೀಡಿ ಅಧಿಕಾರಿಗಳು ಕಾಲುವೆಗಳಿಗೆ ನೀರು ಹರಿಸಲು ಹಿಂದೇಟು ಹಾಕುತ್ತಿದ್ದಾರೆ.
ಇನ್ನೂ 10ರಿಂದ 15 ಟಿಎಂಸಿ ಅಡಿ ನೀರು ಸಂಗ್ರಹವಾದ ಬಳಿಕವೇ ನೀರು ಬಿಡುವ ನಿಲುವು ಹೊಂದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಬಹುದು ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಹಲವು ಜನಪರ ನಿರ್ಧಾರಗಳನ್ನು ಕೈಗೊಂಡಿರುವ ನೀವು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆಗೂ ಆದ್ಯತೆ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಶಿವಾನಂದ ಪಾಟೀಲ ಮನವಿ ಮಾಡಿದ್ದಾರೆ.ಆಲಮಟ್ಟಿ ಜಲಾಶಯ ಹಿಂಗಾರಿನಲ್ಲಾದರೂ ಭರ್ತಿಯಾಗುವ ವಿಶ್ವಾಸವಿರುವುದರಿಂದ ಭವಿಷ್ಯದ ಆತಂಕಗಳನ್ನು ಬದಿಗೊತ್ತಿ, ತಕ್ಷಣ ಕಾಲುವೆಗಳಿಗೆ ನೀರು ಹರಿಸಲು ಆದೇಶಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 