ಪತ್ರಿಕೋದ್ಯಮದಲ್ಲಿ ಶಿವಾನಂದಗೆ ರಾ್ಯಂಕ್
Shivananda's rank in journalism
ಮಹಾಲಿಂಗಪುರ 09: ನಗರದ ನಿವಾಸಿ, ಯುವ ಪತ್ರಕರ್ತ ಶಿವಾನಂದ ನೇಗಿನಾಳ ಅವರು ಎಂ ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ 5ನೇ ರಾ್ಯಂಕ್ ಗಳಿಸಿದ್ದು, ಮಂಗಳವಾರ ನಡೆದ ತುಮಕೂರು ವಿಶ್ವವಿದ್ಯಾನಿಲಯದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಯಿತು.
ವಿದ್ಯಾರ್ಥಿ ದೆಸೆಯಲ್ಲಿಯೇ ಸಾಹಿತ್ಯದ ಆಸಕ್ತಿ ಬೆಳೆಸಿಕೊಂಡು ಎರಡು ಕೃತಿಗಳನ್ನು ರಚಿಸಿದ್ದಾರೆ. ಸದ್ಯ ತುಮಕೂರಿನಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿವಾನಂದ ಅವರು ಡಿಪ್ಲೊಮಾ ಇಂಜಿನಿಯರಿಂಗ್ ಪದವಿ ಪಡೆದು, ಆಸಕ್ತಿಗೆ ತಕ್ಕಂತೆ ಮಾಧ್ಯಮ ಕ್ಷೇತ್ರಕ್ಕೆ ಪಾದಾರೆ್ಣ ಮಾಡಿದ್ದಾರೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮುಧೋಳದ ಎಸ್ ಆರ್ ಕಂಠಿ ಮಹಾವಿದ್ಯಾಲಯದಲ್ಲಿ ಬಿಎ ಹಾಗೂ ತುಮಕೂರಿನ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಎಂ. ಎ ಪದವಿ ಪಡೆದಿದ್ದಾರೆ.
ಶಿವಾನಂದ ನೇಗಿನಾಳ ಸಾಧನೆಗೆ ಕಂಠಿ ಕಾಲೇಜಿನ ಪ್ರಾಚಾರ್ಯ ಜಿಗಬಡಗಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ ಸೇರಿ ನಗರದ ಅನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 