ಶಿವಾನಂದ ಮಾಯಗೇರಿ ಎಲ್ಲರ ಮೆಚ್ಚುಗೆಗೆ ಪಾತ್ರ: ಬೊಮ್ಮಾಯಿ
Shivananda Mayageri wins everyone's appreciation: Bommai
ಶಿಗ್ಗಾವಿ, ಸೆ.20: ಇಂದಿನ ದಿನಗಳಲ್ಲಿ ಶ್ರೀಮಂತಿಕೆ ಎನ್ನುವುದು ಹಣ-ಸಂಪತ್ತಿನಿಂದ ಮಾತ್ರ ನಿರ್ಧಾರವಾಗುವುದಿಲ್ಲ. ಸಾರ್ವಜನಿಕರೊಂದಿಗೆ ಆತ್ಮೀಯತೆ ಹಾಗೂ ಪ್ರಾಮಾಣಿಕ ಸೇವೆಯಿಂದಲೂ ವ್ಯಕ್ತಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಬಹುದು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಪಟ್ಟಣದ ಸಂಗನಬಸವ ಮಂಗಲ ಭವನದಲ್ಲಿ ಸಾಹಿತಿ ಶಿವಾನಂದ ಮಾಯಗೇರಿ ಅವರ 54ನೇ ಹುಟ್ಟುಹಬ್ಬದ ನಿಮಿತ್ತ ಆಯೋಜಿಸಿದ್ದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾನಂದ ಮಾಯಗೇರಿ ಅವರು ಈ ಕ್ಷೇತ್ರದ ಸರಸ್ವತಿ ಪುತ್ರ ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ ಎಂದರು.
ಜೀವನದಲ್ಲಿ ಎದುರಾಗುವ ಹಂತಗಳನ್ನು ಹಂತ ಹಂತವಾಗಿ ಅನುಸರಿಸಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ಮಾಯಗೇರಿ ಅವರು ಅತ್ಯಂತ ವೇಗವಾಗಿ ಸಾಗುತ್ತಿದ್ದಾರೆ. ಇದು ಒಳ್ಳೆಯದಲ್ಲ ಎಂದು ಕಿವಿಮಾತು ಹೇಳಿದ ಬೊಮ್ಮಾಯಿ, ನಮ್ಮ ಕೆಲಸಗಳೇ ಮಾತನಾಡಬೇಕು. ನಾವು ಮಾತನಾಡದಿದ್ದರೂ ಕಾಲ ಕೂಡಿ ಬಂದಾಗ ಎಲ್ಲ ವಿಚಾರಗಳು ಹೊರಬರುತ್ತವೆ. ಸತ್ಯಕ್ಕೆ ಜಯವಿದೆ, ಸುಳ್ಳಿಗೆ ಜಯವಿಲ್ಲ. ಆ ದಿನಗಳಿಗಾಗಿ ಕಾಯಬೇಕು ಎಂದು ಹೇಳಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 