ತಾಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶಿವಪ್ಪ ಸುಬೇದಾರ್ ಅಧಿಕಾರ ಸ್ವೀಕಾರ
ಕುಷ್ಟಗಿ 23: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನೂತನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶಿವಪ್ಪ ಸುಬೇದಾರ್ ಅಧಿಕಾರ ಸ್ವೀಕರಿಸಿದರು.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಕಳೆದ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಈ ಹಿಂದೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾಕ್ಟರ್ ಜಯರಾಂ ಚೌವ್ಹಾಣ ಅವರನ್ನು ಮೂಲ ಪಶುಸಂಗೋಪನೆ ಇಲಾಖೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಹನುಮಂತ ಗೌಡ ಪೊಲೀಸ್ ಪಾಟೀಲ್, ಮನರೇಗಾ ಸಹಾಯಕ ನಿರ್ದೇಶಕ ಸಂಗಪ್ಪ ರಾಠೋಡ, ತಾಲೂಕು ಪಂಚಾಯತಿ ವ್ಯವಸ್ಥಾಪಕ ಬಸವರಾಜ ಪಾಟೀಲ್, ಯೋಜನಾಧಿಕಾರಿ ಶ್ರೀಶೈಲ ಪೊಲೀಸ್ ಪಾಟೀಲ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರಶಾಂತ್, ದೇವೇಂದ್ರ್ಪ ಕಮತರ, ಪ್ರಶಾಂತ್ ಹಾಗೂ ತಾಲೂಕು ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.