ಶಿವರಾತ್ರಿ ಹಾಗೂ ಪ್ರೇಮಿಗಳ ದಿನ: ‘ಪ್ರೇಮ್ ಲವ್ಸ್ ನಂದಿನಿ’
Shivaratri and Valentine's Day: 'Prem Loves Nandini'
ಲೋಕದರ್ಶನ ವರದಿ
ವಿಚ್ಛೇದನದ ವಾಸ್ತವಕ್ಕೆ ಹಿಡಿದ ಕನ್ನಡಿ ‘ಪ್ರೇಮ್ ಲವ್ಸ್ ನಂದಿನಿ’ ವಿಶ್ವಪ್ರಕಾಶ ಮಲಗೊಂಡ ಅಭಿನಯ ಇಂದಿನ ಯುವ ಪೀಳಿಗೆಯ ಪ್ರೇಮ ಮತ್ತು ವಿಚ್ಛೇದನದಂತಹ ಸಂಕೀರ್ಣ ಸಂಬಂಧಗಳ ಮೇಲೆ ಬೆಳಕು ಚೆಲ್ಲುವ ‘ಪ್ರೇಮ್ ಲವ್ಸ್ ನಂದಿನಿ’ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ.
ಬಿ ಆರ್ ಫಿಲಂ ಐಕಾನ್ ವಾಹಿನಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಸವರಾಜ ನಂದಿ ನಿರ್ಮಾಣದ ಈ ಚಿತ್ರಕ್ಕೆ ಮಹಿಳಾ ನಿರ್ದೇಶಕಿ ಸುಧಾ ಅಣ್ಣಾಶೇಠ ಆ್ಯಕ್ಷನ್ ಕಟ್ ಹೇಳಿದ್ದಾರೆ. ನಟ ವಿಶ್ವಪ್ರಕಾಶ ಟಿ ಮಲಗೊಂಡ ನಾಯಕನಾಗಿ ನಟಿಸಿದ 20ನೇ ಕಿರುಚಿತ್ರ ಇದಾಗಿದ್ದು, ಸಿರಿ ವೆಂಕಟೇಶ್ ಜೋಡಿಯಾಗಿದ್ದಾರೆ. ಪ್ರೇಮದ ಆಕರ್ಷಣೆಯಿಂದ ಶುರುವಾಗಿ ’ಡೈವೋರ್ಸ’ ಹಂತ ತಲುಪುವ ಇಂದಿನ ಸಂಬಂಧಗಳ ವಾಸ್ತವ ಸ್ಥಿತಿಯನ್ನು ಚಿತ್ರವು ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದೆ. ಶಿವರಾತ್ರಿ ಹಾಗೂ ಪ್ರೇಮಿಗಳ ದಿನದ ವಿಶೇಷವಾಗಿ ಬಿಡುಗಡೆಯಾಗಿರುವ ಈ ಕಿರುಚಿತ್ರ, ಸಮಾಜಕ್ಕೆ ಒಂದು ಗಟ್ಟಿ ಸಂದೇಶ ನೀಡುವಲ್ಲಿ ಯಶಸ್ವಿಯಾಗಿದೆ.
ಇನ್ನು ಈ ಚಿತ್ರಕ್ಕೆ ಬಸವರಾಜ ನಂದಿ ಹಾಗೂ ಸಚಿನ್ ಅವರ ಛಾಯಾಗ್ರಾಹಣವಿದ್ದು, ಪ್ರಜ್ವಲ್ ನಂದಿ ಅವರ ಸಂಕಲನ, ಕ್ರಿಯೇಟಿವ್ ಹೆಡ್ ಆಗಿ ಅಣ್ಣಾಶೇಠ ಅವರು ಕಾರ್ಯ ನಿರ್ವಹಿಸಿದ್ದು, ಪ್ರಸಾದ ತೋಟದ ಅವರ ಪೋಸ್ಟರ್ ಡಿಸೈನ್, ಮೇಕಪ್ ಮಧು, ಡಾ. ಪ್ರಭು ಗಂಜಿಹಾಳ, ಡಾ. ವಿರೇಶ್ ಹಂಡಗಿ, ಹರೀಶ್ ಅರಸು ಅವರ ಪತ್ರಿಕಾ ಸಂಪರ್ಕ, ಉಮೇಶ್ ಕೆ ಎನ್ ಅವರು ಪಬ್ಲಿಸಿಟಿ ಜವಾಬ್ದಾರಿ ಹೊತ್ತಿದ್ದು ಹೀಗೆ ಅನೇಕರು ತಂತ್ರಜ್ಞಾನದಲ್ಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 