ಶಾಕಿಂಗ್ ನ್ಯೂಸ್, ಒಂದೇ ಬಾವಿಯಿಂದ 9 ಮೃತದೇಹ ಪತ್ತೆ
ಹೈದರಾಬಾದ್ , ಮೇ 23, ತೆಲಂಗಾಣದ ವಾರಂಗಲ್ ನಲ್ಲಿ ಒಂದೇ ಬಾವಿಯಿಂದ ಬರೋಬ್ಬರಿ 9 ಮಂದಿಯ ಮೃತದೇಹಗಳು ಪತ್ತೆಯಾಗಿರುವ ಅಪರೂಪದ ವಿಚಿತ್ರ , ಶಾಕಿಂಗ್ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ವಾರಂಗಲ್ ಜಿಲ್ಲೆಯ ಗೋರ್ರೆಕುಂಟಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗುರುವಾರ ಬಾವಿಯಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದವು.ಶುಕ್ರವಾರ ಮತ್ತೊಂದು ಮೃತದೇಹ ಪತ್ತೆಯಾಗಿತ್ತು. ಬಳಿಕ ಪೊಲೀಸರು ಬಾವಿಯಿಂದ ನೀರು ಹೊರಹಾಕಿದಾಗ ಮತ್ತೆ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದು ಈ ಮೂಲಕ ಒಂದೇ ದಿನ 9 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸ್ಥಳೀಯ ಜನರು ಈ ಘಟನೆಯ ಬಗ್ಗೆ ಬೆಚ್ಚಿ ಬಿದ್ದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 