ಬಾಲ ಪ್ರತಿಭೆ ಪ್ರೋತ್ಸಾಹಿಸುವ ಚಿಗುರು ಕಾರ್ಯಕ್ರಮ ಯಶಸ್ವಿ
ಕೊಪ್ಪಳ 21: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾಗ್ಯನಗರದ ಜ್ಞಾನಬಂಧು ಹಿರಿಯ ಪ್ರಾಥಮಿಕ ಶಾಲೆಯ ಕನ್ವೆನ್ಷನ್ ಹಾಲ್ನಲ್ಲಿ (ಸೆ.21) ಆಯೋಜಿಸಲಾಗಿದ್ದ ಬಾಲ ಪ್ರತಿಭೆ ಪ್ರೋತ್ಸಾಹಿಸುವ ಚಿಗುರು ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮವನ್ನು ಸಾಹಿತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿಠ್ಠಪ್ಪ ಗೋರಂಟ್ಲಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಹಿಂದುಸ್ಥಾನಿ ವಾದ್ಯ ಸಂಗೀತ ಕಾರ್ಯಕ್ರಮದಡಿ ಮಧು ಮೊರಗೇರಿ ಹಾಗೂ ತಂಡದಿಂದ ತಬಲಾ ವಾದನ, ಹೃಷಿಕೇಶ ಮರೇಗೌಡರ ಹಾಗೂ ತಂಡದಿಂದ ಬಾನ್ಸೂರಿ ವಾದನ, ಸ್ಪೂತರ್ಿ ಸಾಲಿಮಠ ಹಾಗೂ ತಂಡ ಮತ್ತು ಮಧು ಕವಲೂರು ಹಾಗೂ ತಂಡದಿಂದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಹಾಡುಗಾರಿಕೆ, ಅಪೂರ್ವ ಕಟ್ಟಿ ಹಾಗೂ ತಂಡದಿಂದ ಸುಗಮ ಸಂಗೀತ, ಸ್ನೇಹ ಮ್ಯಾಗಡೆ ಹಾಗೂ ತಂಡದಿಂದ ಜನಪದ ಗೀತೆಗಳು, ರಕ್ಷಿತಾ ಆರ್. ನಾಡಗೌಡ ಹಾಗೂ ತಂಡದಿಂದ ಸಮೂಹ ನೃತ್ಯ ಮತ್ತು ಅಪೇಕ್ಷಾ ರವೀಂದ್ರ ರವರಿಂದ ಭರತ ನಾಟ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾಗ್ಯನಗರದ ಜ್ಞಾನಬಂಧು ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ದಾನಪ್ಪ ಕವಲೂರು ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಾಬಣ್ಣ, ಹಿರಿಯ ಕಲಾವಿದ ಕೆ. ಹುಸೇನ್ ಸಾಬ್ ಹಿರೇಮನ್ನಾಪುರ ಹಾಗೂ ರಾಮಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 