ಆಸ್ಟ್ರೇಲಿಯಾದ ಕ್ಯಾನ್‌ಬೆರಾ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ; ಬಂದೂಕಿನೊಂದಿಗೆ ಓರ್ವನ ಬಂಧನ
ಸಿಡ್ನಿ:ಆಗಸ್ಟ್ 12 : ಆಸ್ಟ್ರೇಲಿಯದ ರಾಜಧಾನಿ ಕ್ಯಾನ್‌ಬೆರಾ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಘಟನೆ ನಂತರ ತಕ್ಷಣವೇ ವಿಮಾನ ನಿಲ್ದಾಣದಲ್ಲಿದ್ದವರನ್ನು ತೆರವುಗೊಳಿಸಲಾಗಿದ್ದು, ಮುಖ್ಯ ಟರ್ಮಿನಲ್ ಕಟ್ಟಡದಲ್ಲಿ ಗುಂಡಿನ ಸದ್ದು ಕೇಳಿಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಒಬ್ಬವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯಾವುದೇ ಗಾಯಗಳು ವರದಿಯಾಗಿಲ್ಲ ಎಂದು ಹೇಳಲಾಗಿದೆ.
ಸಿಸಿಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ ಮತ್ತು ಈ ಸಮಯದಲ್ಲಿ ಬಂಧಿತ ವ್ಯಕ್ತಿಯೇ ಘಟನೆಗೆ ಕಾರಣ ಎಂದು ನಂಬಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಕ್ಯಾನ್‌ಬೆರಾ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಮುನ್ನೆಚ್ಚರಿಕೆಯಾಗಿ ಸ್ಥಳಾಂತರಿಸಲಾಗಿದೆ ಮತ್ತು ವಿಮಾನ ನಿಲ್ದಾಣದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ.