ಮನರಂಜನೆ

ಕಿರುಚಿತ್ರ ಪ್ರದರ್ಶನ: ಕಿಚ್ಚನ ಹಿನ್ನೆಲೆ ದನಿದಾನ

ಕಿರುಚಿತ್ರ ಪ್ರದರ್ಶನ: ಕಿಚ್ಚನ ಹಿನ್ನೆಲೆ ದನಿದಾನ

  ಬೆಂಗಳೂರು, ನ. 16  ದಿಢೀರನೆ ಕಣ್ಮರೆಯಾದ ಚಂದನವನದ ನಕ್ಷತ್ರ ಅಪ್ಪು ಸ್ಮರಣೆಗಾಗಿ ಹಮ್ಮಿಕೊಂಡಿದ್ದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ, ಅವರ ಅಭಿನಯದ ಚಿತ್ರಗಳ ಮಾಹಿತಿ, ಸಮಾಜ ಮುಖಿ ಚಟುವಟಿಕೆ, ಸಹಾಯದ ಬಗ್ಗೆ ಕಿರುಚಿತ್ರವೊಂದನ್ನು ಪ್ರದರ್ಶಿಸಲಾಗಿದ್ದು, ಕಿಚ್ಚ ಸುದೀಪ್ ಹಿನ್ನೆಲೆ ದನಿದಾನದ ಮೂಲಕ ಗೆಳೆಯನಿಗೆ ನಮನ ಸಲ್ಲಿಸಿದ್ದಾರೆ.
 
ಪುನೀತ್ ಸೇವಾಕಾರ್ಯಗಳು, ಸಂಕಷ್ಟದಲ್ಲಿದ್ದವರಿಗೆ ನೆರವು, ಎಲ್ಲರೊಡನೆ ಗೌರವದಿಂದ ವರ್ತಿಸುತ್ತಿದ್ದ ರೀತಿಯನ್ನು ಕಿರುಚಿತ್ರದಲ್ಲಿ ಹೇಳಲಾಗಿದೆ.
 
ಪ್ರೇಮದ ಕಾಣಿಕೆ ಚಿತ್ರದಲ್ಲಿ ಬಾಲನಟನಿಂದ ಆರಂಭವಾಗಿ ನಾಯಕ ನಟನಾಗಿ, ನಿರ್ಮಾಪಕನಾಗಿ ಸ್ಯಾಂಡಲ್ ವುಡ್ ಗೆ ನೀಡಿದ ಕೊಡುಗೆ, ಅನಾಥಾಶ್ರಮ, ಶಕ್ತಿಧಾಮ, ಗೋಶಾಲೆಗಳ ನಿರ್ವಹಣೆ ಸೇರಿದಂತೆ ಪುನೀತ್ ಜೀವನ ಚಿತ್ರಣವನ್ನು ಕಿರುಚಿತ್ರದಲ್ಲಿ ನೀಡಲಾಗಿದೆ.

ಸುದ್ದಿ ಓದಿ