ಕಪ್ಪತ್ತ ಮಲ್ಲಯ್ಯ ಜಾತ್ರೆಗೆ ಬಸ್ಗಳ ಕೊರತೆ: ಭಕ್ತರ ಪರದಾಟ
Shortage of buses for Kappatha Mallayya Jatra: Devotees face hardship
ಲಕ್ಷ್ಮೇಶ್ವರ, ಸೆ.3: ಉತ್ತರ ಕರ್ನಾಟಕದ ಪ್ರಸಿದ್ಧ ಕಪ್ಪತ್ತಗುಡ್ಡ ಕಪ್ಪತ್ತ ಮಲ್ಲಯ್ಯನ ಜಾತ್ರೆ ಸೆ. 3ರಂದು ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸಮರ್ಕ ಬಸ್ಗಳ ವ್ಯವಸ್ಥೆ ಕಲ್ಪಿಸದಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.
ಮುಂಡರಗಿ ತಾಲ್ಲೂಕಿನ ಕಪ್ಪತ್ತಗುಡ್ಡದಲ್ಲಿರುವ ಕಪ್ಪತ್ತ ಮಲ್ಲಯ್ಯ ದೇವಸ್ಥಾನಕ್ಕೆ ಗದಗ ಜಿಲ್ಲೆ ಮಾತ್ರವಲ್ಲದೆ ಲಕ್ಷ್ಮೇಶ್ವರ ಸೇರಿದಂತೆ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಜಾತ್ರೆಗೆ ಆಗಮಿಸುತ್ತಿದ್ದಾರೆ. ಆದರೆ ಲಕ್ಷ್ಮೇಶ್ವರ ಬಸ್ ನಿಲ್ದಾಣದಿಂದ ಕಪ್ಪತ್ತಗುಡ್ಡಕ್ಕೆ ವಿಶೇಷ ಬಸ್ಗಳ ವ್ಯವಸ್ಥೆ ಕಲ್ಪಿಸದಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಜಾತ್ರೆಗೆ ತೆರಳಲು ಒತ್ತಾಯ ಬಸ್ಗಳಲ್ಲಿ ಸೀಟಿಗಾಗಿ ಮಹಿಳೆಯರು, ಮಕ್ಕಳು ಸೇರಿದಂತೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಮಹಿಳೆಯರು ಮಗುವನ್ನು ಎತ್ತಿಕೊಂಡೇ ಸೀಟಿಗಾಗಿ ಪರಸ್ಪರ ವಾಗ್ವಾದ ನಡೆಸುತ್ತಿರುವ ದೃಶ್ಯ ಕಂಡುಬಂದಿದೆ. ಬಸ್ಗಳಿಗಾಗಿ ಪ್ರಯಾಣಿಕರು ಗಂಟೆಗಟ್ಟಲೆ ಕಾಯುವಂತಾಗಿದೆ.
ಜಾತ್ರೆಯ ಹಿನ್ನೆಲೆಯಲ್ಲಿ ಕಪ್ಪತ್ತಗುಡ್ಡಕ್ಕೆ ಹೆಚ್ಚುವರಿ ಹಾಗೂ ವಿಶೇಷ ಬಸ್ಗಳ ವ್ಯವಸ್ಥೆ ಮಾಡಬೇಕು. ಪ್ರಮುಖ ಸ್ಥಳಗಳಿಂದ ನೇರ ಬಸ್ ಸೇವೆ ಕಲ್ಪಿಸಿ ಭಕ್ತರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಸಾರಿಗೆ ಸಂಸ್ಥೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 