ಸ್ವಚ್ಛತಾ ಹೀ ಸೇವಾ ಅಭಿಯಾನದ ಶ್ರಮದಾನ ಕಾರ್ಯಕ್ರಮ
ಮುಂಡಗೋಡ 03: ಸ್ವಚ್ಛತಾ ಹೀ ಸೇವಾ ಅಭಿಯಾನದ ಪ್ರಯುಕ್ತ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ತಾಲೂಕು ಘಟಕದರು ಇಲ್ಲಿನ ಜೆಎಮ್ಎಫ್ಸಿ ನ್ಯಾಯಾಲಯದ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ನ್ಯಾಯಾಧೀಶೆ ಧನವತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಅಧ್ಯಕ್ಷ ನಟರಾಜ ಕಾತೂರ, ಉಪಾಧ್ಯಕ್ಷ ನಂದೀಶ ನಿಂಬಾಯಿ ಹಾಗೂ ವಕೀಲರು ಭಾಗವಹಿಸಿದ್ದರು.