ನನ್ನ ಆದರ್ಶ ವ್ಯಕ್ತಿಗೆ ಒಂದು ಪತ್ರ’ ಸ್ಪರ್ಧೆಯಲ್ಲಿ ಶ್ರಾವಣಿಗೆ ವಲಯಮಟ್ಟದ ಪ್ರಶಸ್ತಿ
Shravani wins a zonal-level award in the ‘A Letter to My Role Model’ competition
ಗದಗ, ಸೆ. 5: ಪತ್ರ ಬರೆಯುವಾಗ ನಾವು ಬಳಸುವ ಕೈಬರಹಕ್ಕೆ ಇಂದಿಗೂ ತನ್ನದೇ ಆದ ವಿಶೇಷ ಮೌಲ್ಯವಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಉತ್ತಮ ಕೈಬರಹವನ್ನು ರೂಢಿಸಿಕೊಳ್ಳುವುದು ಶೈಕ್ಷಣಿಕ ಯಶಸ್ಸಿಗೆ ಪ್ರಮುಖ ಅಂಶವಾಗಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ಎಸ್.ಎಸ್. ಶಿರಹಟ್ಟಿ ಹೇಳಿದರು. ಮುಂಡರಗಿ ಪಟ್ಟಣದ ಜಗದ್ಗುರು ತೋಂಟದಾರ್ಯ ವಸತಿ ಸಿಬಿಎಸ್ಇ ಶಾಲೆಯಲ್ಲಿ ಶುಕ್ರವಾರ ಭಾರತೀಯ ಅಂಚೆ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪತ್ರ ಬರೆಯುವ ಅಭಿಯಾನ 2025-26ರ ‘ನನ್ನ ಆದರ್ಶ ವ್ಯಕ್ತಿಗೆ ಒಂದು ಪತ್ರ’ ವಿಷಯದ ಪತ್ರ ಬರೆಯುವ ಸ್ಪರ್ಧೆಯಲ್ಲಿ ವಲಯಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಕುಮಾರಿ ಶ್ರಾವಣಿ ಕರಿಗಾರ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಆಧುನಿಕ ಡಿಜಿಟಲ್ ಮಾಧ್ಯಮ ಹಾಗೂ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಪೆನ್ನು-ಕಾಗದದ ಬಳಕೆಯನ್ನು ಉಳಿಸಿಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಪತ್ರ ಬರೆಯುವ ಹವ್ಯಾಸ ಬೆಳೆಸುವುದು ಮತ್ತು ಸಂವಹನ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಅಂಚೆ ಇಲಾಖೆ ಪ್ರತಿವರ್ಷ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪತ್ರ ಬರೆಯುವ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿರುವ ಕೌಶಲ್ಯಕ್ಕೆ ಸೂಕ್ತ ವೇದಿಕೆ ಕಲ್ಪಿಸುವ ಇಂತಹ ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ದೀನದಯಾಳ ಸ್ಪರ್ಶ ಯೋಜನೆಯಡಿ ಪರೀಕ್ಷೆ ನಡೆಸಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ?6,000 ಪ್ರೋತ್ಸಾಹಧನ ನೀಡಲಾಗುತ್ತದೆ. ಅಂಚೆ ಕಚೇರಿಗಳಲ್ಲಿ ಹೊಸ ಆಧಾರ್ ಕಾರ್ಡ್ ನೋಂದಣಿ ಹಾಗೂ ಹಳೆಯ ಆಧಾರ್ ಕಾರ್ಡ್ಗಳಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ನವೀಕರಣ ಸೇರಿದಂತೆ ವಿವಿಧ ಸೇವೆಗಳು ಲಭ್ಯವಿವೆ. ಸುಕನ್ಯಾ ಸಮೃದ್ಧಿ ಖಾತೆ, ಅಂಚೆ ಜೀವ ವಿಮೆ ಹಾಗೂ ವಿವಿಧ ಜನೋಪಯೋಗಿ ಯೋಜನೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 