ಡಾ.ಪ್ರಭಾಕರ ಕೋರೆಯವರಿಗೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿ
ಶಿಗ್ಗಾವಿ 29: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 64ನೇ ಹುಟ್ಟುಹಬ್ಬದ ನಿಮಿತ್ತವಾಗಿ ಶಿಗ್ಗಾವಿಯಲ್ಲಿ ಜರುಗಿದ ಸಮಾರಂಭವದಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರಿಗೆ ಹಾಗೂ ಆಳ್ವಾಸ ಶಿಕ್ಷಣದ ಸಂಸ್ಥೆಯ ಮುಖ್ಯಸ್ಥರಾದ ಮೋಹನ್ ಆಳ್ವಾ ಅವರಿಗೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಕನ್ನಡ ನಾಡು ನುಡಿ ಸೇವೆಯನ್ನು ಗೈದ ಸಾಧಕರಿಗೆ ಈ ಪ್ರಶಸ್ತಿಯನ್ನು ಕೊಡಮಾಡಲಾಗಿದ್ದು ದಿ.28ರ ಸಂಜೆ ಜರುಗಿದ ಸಮಾರಂಭದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ. ಸಿ. ಪಾಟೀಲ, ಹಾವೇರಿಯ ಶ್ರೀಗಳು ಮೊದಲಾದ ಗಣ್ಯರು ಉಪಸ್ಥಿತರಿದ್ದರು.