ಶ್ರೀ ವಾಲ್ಮೀಕಿ ಕಲಾ ಸೇವಾ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ
ಉರಾಳಾಪುರ 28: ಶ್ರೀ ವಾಲ್ಮೀಕಿ ಮಹಿಳಾ ಕಲಾ ಸಂಸ್ಥೆ, ಹೊಸಪೇಟೆ ವತಿಯಿಂದ ಶ್ರೀ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ 13ನೇ ವರ್ಷದ ವಾರ್ಷಿಕೋತ್ಸವ ಹಾಗೂ 2026ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಹಳ್ಳೂರು ಗ್ರಾಮದ ಶ್ರೀ ಮುರುಗಪ್ಪ ಬಸಪ್ಪ ಮಾಲಗಾರ ಅವರಿಗೆ ಸಮಾಜ ಸೇವೆ ಹಾಗೂ ಪ್ರಾಮಾಣಿಕ ಸೇವೆಯನ್ನು ಗುರುತಿಸಿ "ಶ್ರೀ ವಾಲ್ಮೀಕಿ ಕಲಾ ಸೇವಾ ರಾಜ್ಯ ಮಟ್ಟದ ಪ್ರಶಸ್ತಿ" ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ವಾಲ್ಮೀಕಿ ಮಹಿಳಾ ಕಲಾ ಸಂಸ್ಥೆಯ ಅಧ್ಯಕ್ಷರಾದ ಅನುರಾಧಾ ವಾಲ್ಮೀಕಿ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜಕೀಯ ಮುಖಂಡರು, ಸರ್ಕಾರಿ ಅಧಿಕಾರಿಗಳು, ಗಣ್ಯರು, ಗುರುಹಿರಿಯರು, ಕಲಾವಿದರು, ಸಾಧಕರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.