ಅನುಗ್ರಹ ಯೋಜನೆ ನಿಲ್ಲಿಸದಂತೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ಏ.28, ಕುರಿ,ಮೇಕೆ,ಹಸು, ಎಮ್ಮೆ, ಎತ್ತು ಮುಂತಾದ ಜಾನುವಾರುಗಳು ಸತ್ತಾಗ ರೂ.ಹತ್ತುಸಾವಿರದ ವರೆಗೆ ಪರಿಹಾರ ನೀಡುವ 'ಅನುಗ್ರಹ"ಯೋಜನೆಯನ್ನು ಹಣದ ಕೊರತೆಯ ನೆಪಹೇಳಿ ನಿಲ್ಲಿಸಬಾರದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅದಕ್ಕೆ ಅವಶ್ಯಕ ಅನುದಾನ ಒದಗಿಸಿ ಜಾನುವಾರು ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಣಗುಡ್ಡದ ಬಳಿ ಕರಬೂಜ ಹಣ್ಣು ಹಾಗೂ ಬಳ್ಳಿಯನ್ನು ತಿಂದು ರಾಮಕೃಷ್ಣಪ್ಪ ಎಂಬ ಕುರಿಗಾರರಿಗೆ ಸೇರಿದ ಸುಮಾರು 60 ಕುರಿಗಳು ಹೊಟ್ಟೆ ಒಡೆದು ಸುತ್ತಿವೆ. ಈ ರೀತಿಯ ಪ್ರಕರಣಗಳು ರಾಜ್ಯಾದ್ಯಂತ ಸಂಭವಿಸುತ್ತಿವೆ. ಇದರಿಂದ ಪಶುಪಾಲಕರು ತೀವ್ರ ರೀತಿಯ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನಮ್ಮ ಸರ್ಕಾರದ ಅವಧಿಯಲ್ಲಿ ಆಕಸ್ಮಿಕವಾಗಿ ಕುರಿ, ಮೇಕೆ, ಹಸು, ಎಮ್ಮೆ ಎತ್ತು ಮುಂತಾದ ಜಾನುವಾರುಗಳು ಸತ್ತರೆ ಗರಿಷ್ಠ 10 ಸಾವಿರ ರೂ.ವರೆಗೆ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಗೆ ತಂದಿದ್ದೆವು. ಇದು ಪರಿಣಾಮಕಾರಿಯಾಗಿತ್ತು. ಇದರಿಂದ ಪಶು ಪಾಲಕರಿಗೆ ಸಣ್ಣದೊಂದು ಭದ್ರತೆಯ ಭರವಸೆ ಇತ್ತು.ಈ ಯೋಜನೆಗೆ ನೂರಾರು ಕೋಟಿ ರೂ.ಅನುದಾನದ ಅವಶ್ಯಕತೆಯೂ ಇರುವುದಿಲ್ಲ. ಹಾಗಾಗಿ ಯಾವುದೇ ಕಾರಣಕ್ಕೂ ಅನುಗ್ರಹ ಯೋಜನೆಯನ್ನು ನಿಲ್ಲಿಸಿ ಪಶುಪಾಲಕರ ವಿರೋಧಿ ನಿಲುವನ್ನು ಸರ್ಕಾರ ತೆಗೆದುಕೊಳ್ಳಬಾರದು. ರಾಮಕೃಷ್ಣಪ್ಪ ಮುಂತಾದ ಪಶುಪಾಲಕರಿಗೆ ಪರಿಹಾರವನ್ನು ತುರ್ತಾಗಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದೇನೆ. ಹಾಗೆಯೇ ಅನುಗ್ರಹ ಯೋಜನೆಗೆ ಈಹಣಕಸು ವರ್ಷದಲ್ಲಿ ಅನುದಾನ ನಿಗದಿ ಮಾಡಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 