ಹೂವಿನ ಹಡಗಲಿ

ಸಿದ್ದರಾಮಯ್ಯ ಜು.11ರಂದು ಹೂವಿನಹಡಗಲಿಗೆ ಭೇಟಿ

ಸಿದ್ದರಾಮಯ್ಯ ಜು.11ರಂದು ಹೂವಿನಹಡಗಲಿಗೆ ಭೇಟಿ

ಲೋಕದರ್ಶನ ವರದಿ  

              ಹೂವಿನಹಡಗಲಿ 10: ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜುಲೈ 11ರಂದು ವಿಜಯನಗರ ಜಿಲ್ಲೆ ಹೂವಿನಹಡಗಲಿಗೆ ಭೇಟಿ ನೀಡಲಿದ್ದಾರೆ.  ಅಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿರುವ ಅವರು, ಬೆಳಗ್ಗೆ 11.30ಕ್ಕೆ ಹೂವಿನಹಡಗಲಿಗೆ ಆಗಮಿಸಲಿದ್ದಾರೆ. ಬಳಿಕ ಅವರು ಕನಕ ಭವನಕ್ಕೆ ಭೇಟಿ ನೀಡಲಿದ್ದಾರೆ.  

              ನಂತರ ರೇಣುಕಾ ನಗರದ ರಂಗಭಾರತಿ ರಂಗಮಂದಿರದಲ್ಲಿ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಅವರ 86ನೇ ಜನ್ಮದಿನೋತ್ಸವದ ಅಂಗವಾಗಿ ಎಂ.ಪಿ. ಪ್ರಕಾಶ್ ಅವರ ಕಂಚಿನ ಪ್ರತಿಮೆ ಲೋಕಾರೆ​‍್ಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್‌ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 3.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ. 


ಸುದ್ದಿ ಓದಿ