ಸಿದ್ಧಸಮುದ್ರ ಗ್ರಾಮದ ಕಾನೂನು ಅರಿವು, ನೆರವು ಕಾರ್ಯಕ್ರಮ
ಲೋಕದರ್ಶನ ವರದಿ
ಬೈಲಹೊಂಗಲ 07: ತಾಲೂಕು ಕಾನೂನು ಸಲಹಾ ಸಮೀತಿ, ಗ್ರಾಪಂ.ಬೆಳವಡಿ ಸಹಯೋಗದಲ್ಲಿ ಕಾನೂನು ಅರಿವು, ನೆರವು ಕಾರ್ಯಕ್ರಮವನ್ನು ತಾಲೂಕಿನ ಸಿದ್ಧಸಮುದ್ರ ಗ್ರಾಮದ ವಿಠ್ಠಲ ಮಂದಿರದಲ್ಲಿ ಆಯೋಜಿಸಲಾಗಿತ್ತು.
ನ್ಯಾಯವಾದಿ ಎಸ್.ವಿ. ಸಿದ್ಧಮನಿ ಮಾತನಾಡಿ, ಕಾನೂನಿನ ಬಗ್ಗೆ ಹಳ್ಳಿಯ ಜನರಲ್ಲಿ ಅರಿವು ಮೂಡಿಸಿ ನೆರವು ನೀಡುವುದರ ಸಲುವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನಿರ್ದೇಶನ ನೀಡಿದ್ದು, ಆದ್ದರಿಂದ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಕಾನೂನಿನ ಅರಿವು ನೆರವು ಕಾರ್ಯಕ್ರಮವನ್ನು ಮಾಡಲಾಗುತ್ತಿದೆ, ಗ್ರಾಮದ ಜನರು ಕಾನೂನಿನ ಬಗ್ಗೆ ಯಾವುದೇ ರೀತಿಯ ಸಲಹೆ ಮತ್ತು ನೆರವು ಬೇಕಾಗಿದ್ದಲ್ಲಿ ತಾಲೂಕು ಕಾನೂನು ಸಲಹಾ ಸಮೀತಿಯನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಉಚಿತವಾಗಿ ಸಲಹೆ ಮತ್ತು ನೆರವು ಪಡೆದುಕೊಳ್ಳಬಹುದು ಎಂದರು.
ನ್ಯಾಯವಾದಿ ಎಸ್.ಜಿ.ಭಾವಿ. ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಪ್ರಸ್ತುತ ಸಂದರ್ಭದಲ್ಲಿ ಅವಶ್ಯವಿದೆ, ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ. ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗದೇ ಇರಬಹುದು, ಆದರೂ ನಮ್ಮ ದೈನಂದಿನ ಜೀವನ ಯಾವುದೇ ಅಡೆತಡೆಯಿಲ್ಲದೇ ನೆಮ್ಮದಿಯಿಂದ ಸಾಗಲು ಪ್ರಮಾಣದಲ್ಲಾದರೂ ಕಾನೂನಿನ ಅರಿವು ಪಡೆಯಬೇಕು. ಗ್ರಾಮಾಂತರ ಪ್ರದೇಶದ ದೈನಂದಿನ ಜೀವನ ನಿರ್ವಹಣೆಯಲ್ಲಿ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಕಾನೂನು ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಗ್ರಾಮ ಪಂಚಾಯತ ಉಪಾಧ್ಯಕ್ಷ ಸಿದ್ದಪ್ಪಾ ನಂದಿಹಳ್ಳಿ, ನ್ಯಾಯವಾದಿಗಳಾದ ಎಂ.ಎಸ್ ಬಂಕಾಪುರ್, ಐ.ಎಂ. ಹುಣಸಿಕಟ್ಟಿ. ಪಿಡಿಓ ಉಸ್ಮಾನ್ ನದಾಫ್, ಎಸ್.ಡಿ.ಎ.ಎ. ಕಾಳಪ್ಪ ಕಂಬಾರ, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.