ಸಾವಳಸಂಗದಲ್ಲಿ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರೆ​‍್ಣ

ಸಾವಳಸಂಗದಲ್ಲಿ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರೆ​‍್ಣ  Siddheshwara Swamiji Tree Park dedicated to the public at Savalasanga

ಇಂಡಿ  30: ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಇಲಾಖೆ, ವಿಜಯಪುರ ಹಾಗೂ ಸಾಮಾಜಿಕ ಅರಣ್ಯ ವಲಯ, ಇಂಡಿ ಇವರ ಸಹಯೋಗದಲ್ಲಿ ನಿರ್ಮಿಸಲಾಗಿರುವ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನವನ್ನು ಅರಣ್ಯ ಹಾಗೂ ಪರಿಸರ ಸಚಿವ ರಾಮಲಿಂಗಾರೆಡ್ಡಿ ಜ್ಯೋತಿ ಬೆಳಗಿಸುವ ಮೂಲಕ ಲೋಕಾರೆ​‍್ಣ ಮಾಡಿದರು.  

ನಂತರ ಮಾತನಾಡಿದ ಸಚಿವರು, ಇಂಡಿ ತಾಲೂಕಿನ ಸಾವಳಸಂಗ ಅರಣ್ಯ ಅಭಿವೃದ್ಧಿಗೆ ಅಗತ್ಯವಿರುವಷ್ಟು ಅನುದಾನ ಬಿಡುಗಡೆ ಮಾಡಲಾಗುವುದು. ಇಲ್ಲಿ ಕೃಷ್ಣ ಮೃಗಾಲಯ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.  

ವೃಕ್ಷೋದ್ಯಾನಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರಿಡಲಾಗಿರುವುದು ಸಂತಸದ ವಿಚಾರ. ಸುಮಾರು ?2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಈ ವೃಕ್ಷೋದ್ಯಾನವನ್ನು ಮುಂದಿನ ದಿನಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ರೀತಿಯಲ್ಲಿ ಇನ್ನಷ್ಟು ಸುಂದರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಹೇಳಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ‘ವೈವಿಧ್ಯತೆಯಲ್ಲಿ ಏಕತೆ’ ಸಾರುವ ಭಾರತವು ನೈಸರ್ಗಿಕ, ಸಾಂಸ್ಕೃತಿಕ, ಭಾಷಿಕ ಹಾಗೂ ಧಾರ್ಮಿಕ ವೈಶಿಷ್ಟ್ಯಗಳನ್ನು ಹೊಂದಿರುವ ವಿಶಿಷ್ಟ ದೇಶವಾಗಿದೆ ಎಂದರು. ಸಿದ್ದೇಶ್ವರ ಸ್ವಾಮೀಜಿ ಅವರ ಆಶಯದಂತೆ ಸಾವಳಸಂಗ ಗ್ರಾಮದಲ್ಲಿ ವೃಕ್ಷೋದ್ಯಾನ ನಿರ್ಮಿಸಿರುವುದು ಸಂತಸ ತಂದಿದೆ ಎಂದು ಹೇಳಿದರು.  ಈ ಸಂದರ್ಭದಲ್ಲಿ   ಆಶ್ರಮದ ಶ್ರೀ ಅಮೃತಾನಂದ ಪೂಜಾರ ಹಾಗೂ ವಿಜಯಪುರ ಸಿದ್ದೇಶ್ವರ ಆಶ್ರಮದ ಬಸವಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.  

ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ವಿಜಯಪುರ ಅರಣ್ಯ ಇಲಾಖೆಯ ಅಧಿಕಾರಿಗಳಾದ ಶಿವರುದ್ರ​‍್ಪ ಕಬಾಡೆ, ಮಲ್ಲಿಕಾರ್ಜುನ ಕುಸಿಯಾಳ, ಹಿರಿಯ ಅಧಿಕಾರಿ ಮಂಜುನಾಥ ಚವಾಣ, ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಇಂಡಿ ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾದೇವಪ್ಪ ಏವೂರ, ಚಡಚಣ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಶೋಕ ರಾಠೋಡ, ಕರ್ನಾಟಕ ಸರ್ಕಾರಿ ನೌಕರರ ಸಂಘದ ಇಂಡಿ ತಾಲೂಕು ಅಧ್ಯಕ್ಷ ಬಸವರಾಜ ರಾವೂರ, ಕಾಂಗ್ರೆಸ್ ಮುಖಂಡರಾದ ಎಂ.ಆರ್‌. ಪಾಟೀಲ, ಪ್ರಶಾಂತ ಕಾಳೆ ಸೇರಿದಂತೆ ಅರಣ್ಯ ಇಲಾಖೆಯ ಹಲವು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಧನರಾಜ್ ಮುಜಗೊಂದ ನಿರೂಪಿಸಿದರು.