ಬಳ್ಳಾರಿ

ಜಿಲ್ಲಾಡಳಿತದಿಂದ ಸರಳ ಅಗ್ನಿ ಬನ್ನಿರಾಯ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ಸರಳ ಅಗ್ನಿ ಬನ್ನಿರಾಯ ಜಯಂತಿ ಆಚರಣೆ

ಬಳ್ಳಾರಿ,ಮಾ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಅಗ್ನಿ ಬನ್ನಿರಾಯ ಜಯಂತಿಯನ್ನು ಗುರುವಾರ ಸರಳವಾಗಿ ಆಚರಿಸಲಾಯಿತು. 

ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೊಂಗಿರಣ ಸಭಾಂಗಣದಲ್ಲಿ  ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಯಿತು. 

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ