ಬಾಗಲಕೋಟೆ

ಮಹರ್ಷಿ ವಾಲ್ಮೀಕಿ ಜಯಂತಿ ಸರಳ ಆಚರಣೆ

ಮಹರ್ಷಿ ವಾಲ್ಮೀಕಿ ಜಯಂತಿ ಸರಳ ಆಚರಣೆ


 ಬಾಗಲಕೋಟೆ 26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶಾಸಕ ಉಮೇಶ ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್‌. ಪೂಜಾರ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ಇತರೆ ಗಣ್ಯರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.  ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಎಸ್‌.ಎಂ. ರಾಂಪೂರ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸದಾಶಿವ ಬಡಿಗೇರ, ಸೋಮಣ್ಣ ಬೇವಿನಮರದ ಸೇರಿದಂತೆ ಸಮುದಾಯದ ಮುಖಂಡರಾದ ದ್ಯಾಮಣ್ಣ ಗಾಳಿ, ಹನಮಂತ ಡೋಣಿ, ಮುತ್ತು ನಾಯ್ಕರ, ಯಲ್ಲಪ್ಪ ಸನಕ್ಯಾನವರ ಉಪಸ್ಥಿತರಿದ್ದರು. 


ಸುದ್ದಿ ಓದಿ