ಮುಂದಗೋಡ

ಮೂಲಭೂತ ಸೌಕರ್ಯಗಳಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು :ಶ್ರೀಶೈಲ ಹಳ್ಳೂರ

ಮೂಲಭೂತ ಸೌಕರ್ಯಗಳಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು :ಶ್ರೀಶೈಲ ಹಳ್ಳೂರ

ಮುಂಡಗೋಡ 06:  ಸತತ ಪ್ರಯತ್ನದಿಂದ ರಾಜ್ಯದ ಎಲ್ಲ ಆರೋಗ್ಯ ಕವಚ ಸಿಬ್ಬಂದಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳನ್ನು ಪಡೆಯಲು ಯಶಸ್ವಿಯಾಗಿದ್ದು ಮುಂದಿನ ದಿನಗಳಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಕವಚ(108 ಆಂಬುಲೆನ್ಸ್‌) ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ ಹಳ್ಳೂರ ಹೇಳಿದರು.  

ಆರೋಗ್ಯ ಕವಚ(108 ಆಂಬುಲೆನ್ಸ್‌) ನೌಕರರ ಸಂಘ ರಾಜ್ಯ ಘಟಕದ ವತಿಯಿಂದ ಪಟ್ಟಣದ ನಿವೃತ್ತ ನೌಕರರ ಸಭಾಭವನದಲ್ಲಿ ರವಿವಾರ ಆಯೋಜಿಸಿದ್ದ ಜಿಲ್ಲಾ ಮಾಸಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರಾಮಾಣಿಕ ಸೇವೆ ಮಾಡುವಂತೆ ಕರೆ ನೀಡಿದ ಅವರು 24ಗಂಟೆ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಕವಚ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.  

ಇದೇ ಸಂದರ್ಭದಲ್ಲಿ ಪಟ್ಟಣದ 108 ಆಂಬುಲೆನ್ಸ್‌ನ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಸಿ. ಬಳೂರು ಅವರ ಉತ್ತಮ ಸೇವೆಯನ್ನು ಮೆಚ್ಚಿ ಅವರನ್ನು ಸನ್ಮಾನಿಸಲಾಯಿತು. 

ಈ ವೇಳೆ ರಾಜ್ಯ ಪದಾಧಿಕಾರಿಗಳಾದ ದಯಾನಂದ ಸಾಸನೂರು, ಪಾಂಡಪ್ಪ ಕೊರ್ತಿ, ವಿನಾಯಕ ಮಲ್ಲಾಡದ, ಚಂದ್ರು ಪಲಾವ್, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ನಿಲೇಶ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಭೀಮಪ್ಪ ಬಾರಕೇರ, ಬೆಂಗಳೂರು ಜಿಲ್ಲಾಧ್ಯಕ್ಷ ಚಂದ್ರು ಪುಣ್ಯಕೋಟಿ, ಗದಗ ಜಿಲ್ಲಾಧ್ಯಕ್ಷ ಜಯಚಂದ್ರ ನಾಡಗೌಡ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಹರೀಶ, ಕೊಪ್ಪಳ ಜಿಲ್ಲಾಧ್ಯಕ್ಷ ಅಂಬಣ್ಣ, ಉತ್ತರ ಕನ್ನಡ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು ಹಾಗೂ ಉಳಿದ ಜಿಲ್ಲೆಯ ಸದಸ್ಯರು ಉಪಸ್ಥಿತರಿದ್ದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಧನರಾಜ್ ಸಿ. ಬಳೂರು ಕಾರ್ಯಕ್ರಮ ನಿರೂಪಿಸಿದರು. 


ಸುದ್ದಿ ಓದಿ