ಸಿಂದಗಿ: ಸಂಗೊಳ್ಳಿ ರಾಯಣ್ಣ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Sindagi: Sangolli Rayanna Jayanti and Talent Award Ceremony
ಲೋಕದರ್ಶನ ವರದಿ
ಸಿಂದಗಿ, ಆ.23: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಟಿ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕುಲಶಾಸ್ತ್ರ ಅಧ್ಯಯನ ನಡೆಸಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಮೀಸಲಾತಿ ಹೋರಾಟಕ್ಕೆ ಸದಾ ಬೆಂಬಲ ನೀಡುವುದಾಗಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರದ ಗುದಿಗಿ ಫಂಕ್ಷನ್ ಹಾಲ್ನಲ್ಲಿ ತಾಲೂಕು ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಜಯಂತ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಂಗೊಳ್ಳಿ ರಾಯಣ್ಣ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರ. ಅವರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.
ಬಂಡೆಪ್ಪ ಕಾಶಂಪುರ ಅವರ ಬೇಡಿಕೆಯಂತೆ ಕುರಿಗಾಯಿಗಳಿಗೆ ಹಲವು ಸೌಲಭ್ಯಗಳನ್ನು ರೂಪಿಸಲಾಗಿದೆ. ಸಮಾಜದ ಪ್ರಗತಿಗೆ ಶಿಕ್ಷಣ ಹಾಗೂ ಆರ್ಥಿಕ ಅಭಿವೃದ್ಧಿ ಅತ್ಯವಶ್ಯಕ. ಜನರು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಸರ್ಕಾರದ ವಿವಿಧ ಸೌಲಭ್ಯಗಳನ್ನು ಸಮರ್ಕವಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಶಾಸಕ ಅಶೋಕ ಮನಗೂಳಿ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ವೀರಮರಣ ಹೊಂದಿದ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಸಂದರ್ಭದಲ್ಲಿ ನೀಡಲಾಗುವ ಪುರಸ್ಕಾರಗಳು ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದರು. ಕಾರ್ಯಕ್ರಮವನ್ನು ಪ್ರತಿವರ್ಷವೂ ನಿರಂತರವಾಗಿ ಆಯೋಜಿಸುವಂತೆ ಸಲಹೆ ನೀಡಿದರು.
ಹಾಲುಮತ ಸಮಾಜದ ಸೇವೆಯೊಂದಿಗೆ ರಾಜಕೀಯ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿದಾಗ ಮಾತ್ರ ಸಮಾಜಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಧಾರವಾಡ ರೇವಣಸಿದ್ದೇಶ್ವರ ಮಠದ ಬಸವರಾಜ ದೇವರು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರ್ಪ ಅವರ ಪುತ್ರ ಕೆ.ಎ. ಕಾಂತೇಶ್, ಮಾಜಿ ಸಚಿವ ಬಂಡೆಪ್ಪ ಕಾಶಂಪುರ, ಮಾಜಿ ಶಾಸಕ ಶರಣಪ್ಪ ಸುಣಗಾರ, ಬೆಂಗಳೂರು ಕುವೆಂಪು ಭಾಷಾ ಪ್ರಾಧಿಕಾರದ ಅಧ್ಯಕ್ಷ ಡಾ. ಚನ್ನಪ್ಪ ಕಟ್ಟೆ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳಕೇರಿ, ಡಾ. ಮಹಾಂತೇಶ ತಡಲಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ಅಧ್ಯಕ್ಷ ರಾಯಣ್ಣ ಈವಣಗಿ ಅಧ್ಯಕ್ಷತೆ ವಹಿಸಿದ್ದರು. ಗೋಳಸಾರ ಶ್ರೀಮಠದ ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು, ಗುಬ್ಬೇವಾಡ ಸೋಮೇಶ್ವರ ಆಶ್ರಮದ ಕನಯ್ಯ ಮಹಾರಾಜರು, ಗೌರಿಬಿ ಭಕ್ತಿಮಂದಿರದ ಅಭಿನವ ಯಲ್ಲಾಲಿಂಗ ಮಹಾರಾಜರು ಸೇರಿದಂತೆ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ಭಾವಚಿತ್ರದೊಂದಿಗೆ ಆರಂಭವಾದ ಮೆರವಣಿಗೆಯಲ್ಲಿ ಕಂಬಳಮೇಳ, ಡೊಳ್ಳಿನ ವಾಲಗ, ಗೊಂಬೆಗಳ ಕುಣಿತ ಹಾಗೂ ವಿವಿಧ ವಾದ್ಯವೈಭವ ಗಮನ ಸೆಳೆಯಿತು.
. ಅಂಬಿಗರ ಚೌಡಯ್ಯ, ಡಾ. ಅಂಬೇಡ್ಕರ್ ಹಾಗೂ ಟಿಪ್ಪು ಸುಲ್ತಾನ್ ವೃತ್ತಗಳ ಮೂಲಕ ಸಾಗಿದ ಮೆರವಣಿಗೆ ಗುದಗಿ ಫಂಕ್ಷನ್ ಹಾಲ್ವರೆಗೆ ನಡೆಯಿತು. ಪ್ರಾಚಾರ್ಯ ಎ.ಆರ್. ಹೆಗ್ಗಣದೊಡ್ಡಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಮಾಳಪ್ಪ ಕೆರಕಿ, ಎಸ್.ಎಸ್. ಸಾತಿಹಾಳ, ಪಿ.ಎಸ್. ಅಗ್ನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 